-->
 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ, ಸುಲಿಗೆ ಪ್ರಕರಣದ ಆರೋಪಿ ಬಂಧನ

6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ, ಸುಲಿಗೆ ಪ್ರಕರಣದ ಆರೋಪಿ ಬಂಧನ


ಅತ್ಯಾಚಾರ ಹಾಗೂ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತನನ್ನು ಗುರುಪುರ ಉಳಾಯಿಬೆಟ್ಟು ನಿವಾಸಿ ಮೊಹಮ್ಮದ್ ಇಮ್ರಾನ್ (36) ಎಂದು ಗುರುತಿಸಲಾಗಿದೆ.

ಆರೋಪಿಯ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ, ಪುತ್ತೂರು ಠಾಣೆಯಲ್ಲಿ ಫೋಕ್ಸೋ ಪ್ರಕರಣ, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಬೆದರಿಕೆ ಸುಲಿಗೆ ಪ್ರಕರಣಗಳು ದಾಖಲಾಗಿವೆ. ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ಆ. 24ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.


 

 

  

  

 

Ads on article

Advertise in articles 1

advertising articles 2

Advertise under the article