-->
 ಉಡುಪಿ ಪತ್ರಿಕಾ ಭವನದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಉಡುಪಿ ಪತ್ರಿಕಾ ಭವನದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ


ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ದಿನವನ್ನು ಉಡುಪಿ ಪತ್ರಿಕಾ ಭವನದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು.

ಸಂಘದ ಜಿಲ್ಲಾ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಕೋಶಾಧಿಕಾರಿ ಹರೀಶ್ ಕುಂದರ್, ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್, ವಾರ್ತಾಧಿಕಾರಿ ಮಂಜುನಾಥ್, ಪತ್ರಿಕಾ ಭವನ ಸಮಿತಿಯ ಮಾಜಿ ಸಂಚಾಲಕ ಅಜಿತ್ ಆರಾಡಿ, ರಿಚರ್ಡ್, ರತನ್ ಸುರಭಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷ ದಿನೇಶ್ ಕಿಣಿ ಅವರ ಪ್ರಾಯೋಜಕತ್ವದಲ್ಲಿ ಸಿಹಿ ತಿಂಡಿ ವಿತರಿಸಲಾಯಿತು.


Ads on article

Advertise in articles 1

advertising articles 2

Advertise under the article