-->
ಉಡುಪಿ ಜಿಲ್ಲಾ ಸೇವಾದಳ ಕಾಂಗ್ರೆಸ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಉಡುಪಿ ಜಿಲ್ಲಾ ಸೇವಾದಳ ಕಾಂಗ್ರೆಸ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ


ಉಡುಪಿ ಜಿಲ್ಲಾ ಸೇವಾದಳ ಕಾಂಗ್ರೆಸ್ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಉಡುಪಿ ಕ್ಲಾಕ್ ಟವರ್ ಬಳಿ ಆಚರಿಸಲಾಯಿತು.

ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರು ಧ್ವಜಾರೋಹಣ ನೆರವೇರಿಸಿದರು.

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶದ ಪ್ರಜಾಪ್ರಭುತ್ವ ಮೌಲ್ಯಗಳನ್ನು ಸ್ಮರಿಸಲಾಯಿತು. 

ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾರ್ಯಾಧ್ಯಕ್ಷರಾದ ಶ್ರೀ ಕಿಶನ್ ಹೆಗ್ಡೆ, ಪ್ರಸಾದ್ ರಾಜ್ ಕಾಂಚನ್, ಉದಯ್ ಶೆಟ್ಟಿ ಮುನಿಯಾಲು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರಮೇಶ್ ಕಾಂಚನ್ ಸೇರಿದಂತೆ ಸೇವಾದಳದ ಸದಸ್ಯರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.



Ads on article

Advertise in articles 1

advertising articles 2

Advertise under the article