-->
 ಅಂಬಲಪಾಡಿ ‘ಸರಸ್ವತೀ’ ಶಿಶುಮಂದಿರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಅಂಬಲಪಾಡಿ ‘ಸರಸ್ವತೀ’ ಶಿಶುಮಂದಿರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ


ಅಂಬಲಪಾಡಿಯ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಶ್ರೀಮತಿ ತ್ರಿಪುರ ಸುಂದರಿ ಬಲ್ಲಾಳ್ ‘ಸರಸ್ವತೀ’ ಶಿಶುಮಂದಿರದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.


ದೇವಾಲಯದ ಧರ್ಮದರ್ಶಿಗಳಾದ ಡಾ. ನಿ.ಬಿ. ವಿಜಯ ಬಲ್ಲಾಳ್ ಅವರ ಉಪಸ್ಥಿತಿಯಲ್ಲಿ, ಜಿಲ್ಲೆಯ ಖ್ಯಾತ ವೈದ್ಯರಾದ ಡಾ. ಶ್ರೀಪತಿ ಭಟ್ ಅವರು ಧ್ವಜಾರೋಹಣ ನೆರವೇರಿಸಿದರು.

‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆಯ ಅಂಗವಾಗಿ, ‘ನನ್ನ ರಾಷ್ಟ್ರ – ನನ್ನ ಹೆಮ್ಮೆ’ ಎಂಬ ಧ್ಯೇಯದೊಂದಿಗೆ ವಿಶೇಷ ಸೆಲ್ಫಿ ಸ್ಟ್ಯಾಂಡ್‌ನ್ನು ಸ್ಥಾಪಿಸಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸೆಲ್ಫಿ ತೆಗೆದುಕೊಳ್ಳುವ ಮೂಲಕ ದೇಶಭಕ್ತಿಯ ಭಾವನೆಯನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಸೋನಿಯಾ ಅವರು ವಂದಿಸಿದರು. ಶಾಲಿನಿ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು, ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಹೆಚ್ಚಿಸಿದರು.


 

Ads on article

Advertise in articles 1

advertising articles 2

Advertise under the article