-->
 ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ


ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಉಡುಪಿ ವಲಯ ಸಮಿತಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಕಛೇರಿ ಮುಂಭಾಗದಲ್ಲಿ ಆಚರಿಸಲಾಯಿತು.


ಸಿಐಟಿಯು ಉಡುಪಿ ಜಿಲ್ಲಾಧ್ಯಕ್ಷರಾದ ಶಶಿಧರ್ ಗೊಲ್ಲ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಅಧ್ಯಕ್ಷರಾದ ಸಂಜೀವ ಬಳ್ಕೂರು ಅವರು ಶುಭ ಹಾರೈಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕಟ್ಟಡ ಸಂಘದ ಅಧ್ಯಕ್ಷರಾದ ಸುಭಾಸ್ ನಾಯಕ್, ಕೋಶಾಧಿಕಾರಿ ವಾಮನ ಪೂಜಾರಿ, ಮುಖಂಡರಾದ ರಾಮ ಸಾಲ್ಯಾನ್, ಸರೋಜ ಎಸ್., ಮುರಳಿ ಹಾಗೂ ಉಡುಪಿ ಬೀಡಿ ಮತ್ತು ಟೊಬ್ಯಾಕೋ ಲೇಬರ್ ಯೂನಿಯನ್ ಅಧ್ಯಕ್ಷರಾದ ನಳಿನಿ, ಕಾರ್ಯದರ್ಶಿ ಉಮೇಶ್ ಕುಂದರ್, ಸಾರಿಕ, ಶರ್ಮಿಳಾ, ಸೌಮ್ಯ ಸೇರಿದಂತೆ ಸಿಐಟಿಯು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.

ಸಿಐಟಿಯು ಉಡುಪಿ ವಲಯ ಸಂಚಾಲಕರಾದ ಕವಿರಾಜ್ ಎಸ್. ಕಾಂಚನ್ ಅವರು ಕಾರ್ಯಕ್ರಮವನ್ನು ನಿರೂಪಿಸಿ, ವಂದನಾರ್ಪಣೆ ಸಲ್ಲಿಸಿದರು.

Ads on article

Advertise in articles 1

advertising articles 2

Advertise under the article