ಉಡುಪಿ ಜಿಲ್ಲಾ ನಾಗರಿಕ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ
Saturday, August 15, 2026
ಉಡುಪಿ ಜಿಲ್ಲಾ ನಾಗರಿಕ ಸಮಿತಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಉಡುಪಿ ಜಿಲ್ಲಾ ನಾಗರಿಕ ಸಮಿತಿ ಹಾಗೂ ಮಿತ್ರ ಸ್ಕೂಲ್ ಆಫ್ ನರ್ಸಿಂಗ್ ಸಹಯೋಗದಲ್ಲಿ ನಾಗರಿಕ ಸಮಿತಿಯ ಕಚೇರಿಯ ಮುಂಭಾಗದಲ್ಲಿ 20×14 ಅಡಿ ಅಳತೆಯ ಬೃಹತ್ ರಾಷ್ಟ್ರಧ್ವಜವನ್ನು ಪ್ರದರ್ಶಿಸುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಭೀಮಾ ಜುವೆಲ್ಲರ್ಸ್‌ನ ಮ್ಯಾನೇಜರ್ ಆಶೀಶ್ ಅವರು ದೇಶದ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಹಾಗೂ ಬಲಿದಾನಗಳನ್ನು ಸ್ಮರಿಸಿ, ರಾಷ್ಟ್ರದ ಏಕತೆ ಮತ್ತು ಸೌಹಾರ್ದತೆಯನ್ನು ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಮಿತ್ರ ಸ್ಕೂಲ್ ಆಫ್ ನರ್ಸಿಂಗ್‌ನ ಪ್ರಾಂಶುಪಾಲೆ ವನಿತಾ, ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.