ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
ಬಿಜೆಪಿ ಉಡುಪಿ ಜಿಲ್ಲೆ ಹಾಗೂ ಉಡುಪಿ ನಗರ ಮಂಡಲದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಉಡುಪಿಯ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ಹಾಗೂ ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯ ಕುರಿತು ಸಂದೇಶ ನೀಡಿದರು.
ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಎ. ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ನಿಕಟಪೂರ್ವ ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ ಹಾಗೂ ಶ್ರೀಕಾಂತ್ ನಾಯಕ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಎಸ್‌ಸಿ ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ಜಿಲ್ಲಾ ಉಪಾಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಮಾಜಿ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಸೇರಿದಂತೆ ಪಕ್ಷದ ಹಲವು ಪ್ರಮುಖರು ಉಪಸ್ಥಿತರಿದ್ದರು.
ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀನಿಧಿ ಹೆಗ್ಡೆ, ಗಿರೀಶ್ ಎಂ. ಅಂಚನ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಮಂಜುನಾಥ್ ಮಣಿಪಾಲ, ಜಿಲ್ಲಾ ಸರಳ್ ಆಪ್ ಪ್ರಮುಖ್ ಚಂದ್ರಶೇಖರ ಪ್ರಭು, ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು ಹಾಗೂ ರಶ್ಮಿತಾ ಬಿ. ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಮಾಜಿ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಪಂದುಬೆಟ್ಟು, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರಥ್ವಿರಾಜ್ ಮಣಿಪಾಲ, ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು, ಪ್ರಧಾನ ಕಾರ್ಯದರ್ಶಿ ತ್ರಿವೇಣಿ ಹಾಗೂ ನಗರ ಎಸ್‌ಟಿ ಮೋರ್ಚಾ ಅಧ್ಯಕ್ಷೆ ಸುಮಾ ನಾಯ್ಕ್ ಸೇರಿದಂತೆ ಪಕ್ಷದ ವಿವಿಧ ಮೋರ್ಚಾ, ಪ್ರಕೋಷ್ಠ, ಮಂಡಲ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
