-->
 ಉಡುಪಿ ಪೋದಾರ್ ಅಂತರಾಷ್ಟ್ರೀಯ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಉಡುಪಿ ಪೋದಾರ್ ಅಂತರಾಷ್ಟ್ರೀಯ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ


ಉಡುಪಿ ಪೋದಾರ್  ಅಂತರಾಷ್ಟ್ರೀಯ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15ರಂದು ಬೆಳಿಗ್ಗೆ 8 ಗಂಟೆಗೆ ಸಂಭ್ರಮದಿಂದ ಆಚರಿಸಲಾಯಿತು.


ರಾಷ್ಟ್ರಗೀತೆ ಹಾಗೂ ದೇಶಭಕ್ತಿ ಗೀತೆಗಳ ಮೂಲಕ ಭಾರತಮಾತೆಗೆ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕರ್ನಲ್ ಡಾ. ಅಜಯ್ ಕುಮಾರ್ ಅವರು ಆಗಮಿಸಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಕರ್ನಲ್ ಡಾ. ಅಜಯ್ ಕುಮಾರ್ ಅವರು ಮಾತನಾಡಿ, ವಿದ್ಯಾರ್ಥಿಗಳು ದೇಶದ ಭವಿಷ್ಯದ ನಿರ್ಮಾತೃಗಳಾಗಿದ್ದು, ಅಂಕಗಳ ಜೊತೆಗೆ ಉತ್ತಮ ವ್ಯಕ್ತಿತ್ವ ಮತ್ತು ಗುಣನಡತೆಯನ್ನು ಬೆಳೆಸಿಕೊಳ್ಳಬೇಕು. “ಒಗ್ಗಟ್ಟಿನಲ್ಲಿ ಬಲವಿದೆ” ಎಂಬುದನ್ನು ಅರಿತು ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯಬೇಕು ಹಾಗೂ ದೇಶಪ್ರೇಮವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.


ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಾಂಶುಪಾಲರಾದ ನೇತ್ರಾ ಎಚ್. ಅವರು ಪೋಷಕರನ್ನು ದೇಶಭಕ್ತಿ ಗೀತೆ ಹಾಡಲು ಪ್ರೇರೇಪಿಸಿದರು. ಪೋಷಕರು ಉತ್ಸಾಹದಿಂದ ದೇಶಭಕ್ತಿ ಗೀತೆಯನ್ನು ಹಾಡಿ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ತಂದರು.


ಶಾಲೆಯ ಸಂಯೋಜಕರಾದ ಹರೀಶ್ ನಾಯಕ್, ಮುಖ್ಯ ಶಿಕ್ಷಕಿ ಗೀತಾ ಲವಿನ್ ಪೂಜಾರಿ ಹಾಗೂ ಪ್ರಾಂಶುಪಾಲರಾದ ನೇತ್ರಾ ಎಚ್. ಅವರು ಉಪಸ್ಥಿತರಿದ್ದರು.


ವಿದ್ಯಾರ್ಥಿಗಳು ವಿವಿಧ ದೇಶಭಕ್ತಿ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ದೇಶದ ಏಕತೆ, ಶಾಂತಿ ಹಾಗೂ ಪ್ರಗತಿಯ ಮಹತ್ವವನ್ನು ಸಾರಿದರು.


 

Ads on article

Advertise in articles 1

advertising articles 2

Advertise under the article