ಆ.9ರಂದು ಮಣಿಪಾಲದಲ್ಲಿ ಕೆನರಾ ಬ್ಯಾಂಕ್ 5ನೇ ಆವೃತ್ತಿಯ ಫ್ರೀಡಂ ರನ್
Thursday, August 06, 2026
ಪರಿಸರ ಸಂರಕ್ಷಣೆ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೆನರಾ ಬ್ಯಾಂಕ್‌ನ 5ನೇ ಆವೃತ್ತಿಯ ಫ್ರೀಡಂ ರನ್ ಕಾರ್ಯಕ್ರಮವನ್ನು ಆಗಸ್ಟ್ 9ರಂದು (ಭಾನುವಾರ) ಮಣಿಪಾಲದ ಕೆನರಾ ಬ್ಯಾಂಕ್ ವೃತ್ತ ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಸಚಿನ್ ಶೆಟ್ಟಿ ತಿಳಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದ ಫ್ರೀಡಂ ರನ್ ಅನ್ನು 'ಗೋ ಗ್ರೀನ್' ಥೀಮ್‌ನಡಿ ಆಯೋಜಿಸಲಾಗಿದ್ದು, ಪರಿಸರ ಸಂರಕ್ಷಣೆ ಹಾಗೂ ಆರೋಗ್ಯಕರ ಜೀವನಶೈಲಿಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ 21 ಕಿ.ಮೀ., 10 ಕಿ.ಮೀ., 5 ಕಿ.ಮೀ., 3 ಕಿ.ಮೀ. ಹಾಗೂ ಫನ್ ರನ್ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಬೆಳಿಗ್ಗೆ 5 ಗಂಟೆಗೆ ಫ್ರೀಡಂ ರನ್‌ಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಫ್ರೀಡಂ ರನ್‌ನಲ್ಲಿ ಭಾಗವಹಿಸಲು ಇಂದಿನಿಂದಲೇ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು. ಸುದ್ದಿಗೋಷ್ಟಿಯಲ್ಲಿ ಬ್ಯಾಂಕಿನ ಮ್ಯಾನೇಜರ್ ಗಳಾದ ದುರ್ಗಾಪ್ರಸಾದ್, ಸೂರಜ್ ಉಪ್ಪೂರು, ಸಿದ್ದಾರ್ಥ್ ಮೊದಲಾದವರು ಉಪಸ್ಥಿತರಿದ್ದರು.