-->
 ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಸಾವು

ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಸಾವು


ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ರಿಕ್ಷಾ ಚಾಲಕ ಬೊಳ್ಳಾರು ಮಾಧವ ಅಮೀನ್ ಅವರ ಪುತ್ರ ಲಿಖಿತ್ ಅಮೀನ್ (15) ಎಂದು ಗುರುತಿಸಲಾಗಿದೆ. ಆಟದ ವೇಳೆ ಏಕಾಏಕಿ ಕುಸಿದು ಬಿದ್ದ ಲಿಖಿತ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಲಿಖಿತ್ ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.  


Ads on article

Advertise in articles 1

advertising articles 2

Advertise under the article