-->
 ರಸ್ತೆ ಬದಿಯ ಗಿಡಗಂಟಿ ಸ್ವಚ್ಛಗೊಳಿಸುವಂತೆ ನೆಹರೂ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ನಿಂದ ಮನವಿ

ರಸ್ತೆ ಬದಿಯ ಗಿಡಗಂಟಿ ಸ್ವಚ್ಛಗೊಳಿಸುವಂತೆ ನೆಹರೂ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ನಿಂದ ಮನವಿ


ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಪ್ರದೇಶಗಳ ರಸ್ತೆ ಬದಿಗಳಲ್ಲಿ ಬೃಹದಾಕಾರವಾಗಿ ಬೆಳೆದಿರುವ ಹುಲ್ಲು, ಗಿಡಗಂಟಿ ಹಾಗೂ ಪೊದೆಗಳನ್ನು ಸ್ವಚ್ಛಗೊಳಿಸುವಂತೆ ಅಲೆವೂರು ನೆಹರೂ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಅಲೆವೂರು ಗ್ರಾಮದ ಜೋಡುರಸ್ತೆ, ಅಲೆವೂರು–ಮಣಿಪಾಲ ರಸ್ತೆ, ವಿಶ್ವ ಗ್ರೀನ್ಸ್ ಲೇಔಟ್, ಹೊನ್ನೆಕೋಡಿ, ನೆಹರೂ ನಗರ–ನೈಲಪಾದೆ, ಕೋಡಿ ಬ್ರಹ್ಮಲಿಂಗೇಶ್ವರ ದೇವಸ್ಥಾನ ರಸ್ತೆ, ಆದರ್ಶ ನಗರ–ಕೋಡಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ರಸ್ತೆ ಬದಿಯಲ್ಲಿ ಗಿಡಗಂಟಿಗಳು ಬೆಳೆದು ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು.

ಕಳೆದ ಐದು ವರ್ಷಗಳಿಂದ ಪಂಚಾಯತ್ ಚುನಾಯಿತ ಮಂಡಳಿಯ ನೇತೃತ್ವದಲ್ಲಿ ರಸ್ತೆ ಬದಿಯ ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸುವ ಕಾರ್ಯವನ್ನು ನಿರಂತರವಾಗಿ ನಡೆಸಿಕೊಂಡು ಬಂದಿರುವುದನ್ನೂ ಈ ಸಂದರ್ಭದಲ್ಲಿ ಪ್ರಸ್ತಾಪಿಸಲಾಯಿತು. ಸಾರ್ವಜನಿಕರ ಸುರಕ್ಷತೆ, ಸುಗಮ ಸಂಚಾರ ಹಾಗೂ ಗ್ರಾಮ ಸ್ವಚ್ಛತೆಯ ದೃಷ್ಟಿಯಿಂದ ಮುಂದೆಯೂ ನಿಯಮಿತವಾಗಿ ರಸ್ತೆ ಬದಿಗಳನ್ನು ಸ್ವಚ್ಛಗೊಳಿಸುವ ಅಗತ್ಯವಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ನೆಹರೂ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಪ್ರತಾಪ್ ಕುಂದರ್, ಕೋಶಾಧಿಕಾರಿ ಜಯ ಶೇರಿಗಾರ್, ಸಂಸ್ಥೆಯ ಸದಸ್ಯರು ಹಾಗೂ ಅಲೆವೂರು ಗ್ರಾಮ ಪಂಚಾಯತ್‌ನ ನಿಕಟಪೂರ್ವ ಸದಸ್ಯ ಶಬರೀಶ್ ಸುವರ್ಣ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article