-->
 ಮುದರಂಗಡಿ ಪಂಚಾಯತ್ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ ಮೇಲೆ ಗುಂಡಿನ ದಾಳಿ

ಮುದರಂಗಡಿ ಪಂಚಾಯತ್ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ ಮೇಲೆ ಗುಂಡಿನ ದಾಳಿ


ಕಾಪು ಸಮೀಪದ ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ ಅವರ ಮೇಲೆ ಶುಕ್ರವಾರ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಯಲ್ಲಿ ಡೇವಿಡ್ ಅವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಘಟನೆ ನಡೆದ ತಕ್ಷಣ ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. 

ಡೇವಿಡ್ ಡಿಸೋಜಾ ಅವರು ಪ್ರಿನ್ಸ್ ಬಾರ್‌,  ಪ್ರಿನ್ಸ್ ಬಸ್ ನ ಮಾಲಕರಾಗಿದ್ದು, ಗುತ್ತಿಗೆದಾರರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ 2020ರಲ್ಲಿ ಶಿರ್ವ ಚರ್ಚ್‌ನ ಸಹಾಯಕ ಫಾದರ್ ಮಹೇಶ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಶಿಕ್ಷೆ ಅನುಭವಿಸಿ ಬಳಿಕ ಬಿಡುಗಡೆಗೊಂಡಿದ್ದರು.

ಪ್ರಸ್ತುತ ಗುಂಡಿನ ದಾಳಿ ಪ್ರಕರಣದ ಹಿಂದಿನ ಉದ್ದೇಶ ಹಾಗೂ ಆರೋಪಿಗಳ ಪತ್ತೆಗಾಗಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಹೆಚ್ಚಿನ ಮಾಹಿತಿ ತನಿಖೆಯ ಬಳಿಕವೇ ಲಭ್ಯವಾಗಲಿದೆ. 

Ads on article

Advertise in articles 1

advertising articles 2

Advertise under the article