ಕಾರ್ಕಳ: ನಿವೃತ್ತ ಕಂದಾಯ ನಿರೀಕ್ಷಕ ಶಿವರಾಮ್ ನಿಧನ
Monday, August 24, 2026
ಕಾರ್ಕಳದ ಬಂಡಿಮಠ ನಿವಾಸಿ, ನಿವೃತ್ತ ಕಂದಾಯ ನಿರೀಕ್ಷಕ ಶಿವರಾಮ್ (68) ಅವರು ಅಲ್ಪ ಕಾಲದ ಅನಾರೋಗ್ಯದ ಬಳಿಕ ಸೋಮವಾರ ಬೆಂಗಳೂರಿನಲ್ಲಿ ನಿಧನರಾದರು.
ಗ್ರಾಮ ಲೆಕ್ಕಾಧಿಕಾರಿಯಾಗಿ ಕಂದಾಯ ಇಲಾಖೆಗೆ ಸೇರ್ಪಡೆಯಾಗಿದ್ದ ಅವರು, ಉಡುಪಿ ಜಿಲ್ಲೆಯ ವಿವಿಧೆಡೆ ಸೇವೆ ಸಲ್ಲಿಸಿದ್ದರು. ಬಳಿಕ ಕಂದಾಯ ನಿರೀಕ್ಷಕರಾಗಿ ಬಡ್ತಿ ಹೊಂದಿದ್ದರು.
ಸೇವಾವಧಿಯಲ್ಲಿ ಜನಮನ್ನಣೆ ಗಳಿಸಿದ್ದ ಶಿವರಾಮ್ ಅವರು ಸಾರ್ವಜನಿಕ ವಲಯದಲ್ಲಿ ಉತ್ತಮ ಬಾಂಧವ್ಯ ಹೊಂದಿದ್ದರು.
ಮೃತರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮೃತರ ಪಾರ್ಥಿವ ಶರೀರವನ್ನು ಮಂಗಳವಾರ ಮುಂಜಾನೆ ಕಾರ್ಕಳದ ಬಂಡಿಮಠದ ನಿವಾಸಕ್ಕೆ ತರಲಾಗುವುದು. ಬೆಳಗ್ಗೆ 9 ಗಂಟೆಯಿಂದ ಅಂತಿಮ ದರ್ಶನಕ್ಕೆ ಅವಕಾಶವಿದ್ದು, ಆ ಬಳಿಕ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.