-->
 ನೇಪಾಳ ಜಲಪ್ರಳಯದಲ್ಲಿ ಸಿಲುಕಿರುವ ಉಡುಪಿ ನಿವಾಸಿಗಳ ನೆರವಿಗಾಗಿ ಜಿಲ್ಲಾಡಳಿತದಿಂದ ಸಹಾಯವಾಣಿ

ನೇಪಾಳ ಜಲಪ್ರಳಯದಲ್ಲಿ ಸಿಲುಕಿರುವ ಉಡುಪಿ ನಿವಾಸಿಗಳ ನೆರವಿಗಾಗಿ ಜಿಲ್ಲಾಡಳಿತದಿಂದ ಸಹಾಯವಾಣಿ


ನೇಪಾಳದಲ್ಲಿ ಉಂಟಾಗಿರುವ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಿಂದ ಅಲ್ಲಿಗೆ ಪ್ರವಾಸ ಅಥವಾ ಯಾತ್ರೆಗೆ ತೆರಳಿ ಸಂಕಷ್ಟಕ್ಕೆ ಸಿಲುಕಿರುವವರನ್ನು ಸುರಕ್ಷಿತವಾಗಿ ಕರೆತರಲು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಳ್ಳುತ್ತಿದ್ದು, ಜಿಲ್ಲಾ ಮಟ್ಟದ ತುರ್ತು ಸಹಾಯವಾಣಿ ತೆರೆಯಲಾಗಿದೆ.

ಸಂಕಷ್ಟದಲ್ಲಿರುವವರು ಅಥವಾ ಅವರ ಕುಟುಂಬಸ್ಥರು ಅಗತ್ಯ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ನೀಡುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ನೇಪಾಳದಲ್ಲಿ ಪ್ರಸ್ತುತ ಇರುವ ಸ್ಥಳ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಒದಗಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಮಾಹಿತಿಯನ್ನು ಸಂಗ್ರಹಿಸಿ ಅಗತ್ಯ ನೆರವು ಹಾಗೂ ರಕ್ಷಣಾ ಕಾರ್ಯಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಮಾಹಿತಿ ನೀಡಲು: ತುರ್ತು ಸಹಾಯವಾಣಿ: 1077 ಅಥವಾ ದೂರವಾಣಿ: 0820-2574802 ಹಾಗೂ ಜಿಲ್ಲಾಡಳಿತ ಸೂಚಿಸಿರುವ ಗೂಗಲ್ ಫಾರ್ಮ್ ಮೂಲಕವೂ ಸಂಕಷ್ಟದಲ್ಲಿರುವವರ ವಿವರಗಳನ್ನು ದಾಖಲಿಸಬಹುದಾಗಿದೆ. 

ನೇಪಾಳದಲ್ಲಿ ಕುಟುಂಬದ ಸದಸ್ಯರು, ಸಂಬಂಧಿಕರು ಅಥವಾ ಪರಿಚಿತರು ಪ್ರವಾಸಕ್ಕೆ ತೆರಳಿದ್ದು ಅವರ ಸಂಪರ್ಕ ಸಾಧ್ಯವಾಗದಿದ್ದಲ್ಲಿ ವಿಳಂಬ ಮಾಡದೆ ಜಿಲ್ಲಾಡಳಿತವನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.

Ads on article

Advertise in articles 1

advertising articles 2

Advertise under the article