ಲಕ್ಷ್ಮೀ ಮಂಜು ಕೊಳ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಘಟಕ ಸಂತಾಪ
Saturday, August 01, 2026
ಉಡುಪಿಯ ಲಯನ್ಸ್ ಸರ್ಕಲ್ ಸಮೀಪ ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಅವರು ಮೃತಪಟ್ಟಿದ್ದು, ಬಿಜೆಪಿ ಉಡುಪಿ ಜಿಲ್ಲಾ ಘಟಕ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಇಂದು ಮಧ್ಯಾಹ್ನ ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಲಕ್ಷ್ಮೀ ಮಂಜು ಕೊಳ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಅಗಲಿಕೆಯಿಂದ ಪಕ್ಷಕ್ಕೆ ಹಾಗೂ ಸಮಾಜಕ್ಕೆ ಅಪಾರ ನಷ್ಟ ಉಂಟಾಗಿದೆ ಎಂದು ಬಿಜೆಪಿ ಮುಖಂಡರು ಸಂತಾಪ ಸೂಚಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಜಿಲ್ಲಾ ಬಿಜೆಪಿ ಪ್ರಾರ್ಥಿಸಿದೆ.
ಲಕ್ಷ್ಮೀ ಮಂಜು ಕೊಳ ಅವರ ಅಂತಿಮ ಸಂಸ್ಕಾರದ ವಿಧಿವಿಧಾನಗಳು ಇಂದು (ಆಗಸ್ಟ್ 1) ಸಂಜೆ 5.30 ಗಂಟೆಗೆ ಅವರ ಸ್ವಗೃಹ ಮಲ್ಪೆ ಕೊಳ (ಮಲ್ಪೆ ಬೀಚ್ ಸಮೀಪ)ದಲ್ಲಿ ನೆರವೇರಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.