-->
 ಶ್ರೀಕೃಷ್ಣಾಷ್ಟಮಿ ಪ್ರಯುಕ್ತ ಶ್ರೀಕೃಷ್ಣಮಠದಲ್ಲಿ ಆಟೋಟ ಸ್ಪರ್ಧೆಗಳಿಗೆ ಚಾಲನೆ

ಶ್ರೀಕೃಷ್ಣಾಷ್ಟಮಿ ಪ್ರಯುಕ್ತ ಶ್ರೀಕೃಷ್ಣಮಠದಲ್ಲಿ ಆಟೋಟ ಸ್ಪರ್ಧೆಗಳಿಗೆ ಚಾಲನೆ


ಶ್ರೀಕೃಷ್ಣನ ಜನ್ಮಾಷ್ಟಮಿಯ ಅಂಗವಾಗಿ ಶ್ರೀಕೃಷ್ಣ ಮಠ ಪರ್ಯಾಯ ಶೀರೂರು ಮಠದ ವತಿಯಿಂದ ವಿವಿಧ ಮನರಂಜನಾ ಹಾಗೂ ಸಾಂಪ್ರದಾಯಿಕ ಸ್ಪರ್ಧೆಗಳನ್ನು ಆಯೋಜಿಸಲಾಯಿತು.


ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವಿವಿಧ ವಿಭಾಗಗಳ ಸ್ಪರ್ಧೆಗಳಿಗೆ ಚಾಲನೆ ನೀಡಲಾಯಿತು. ಮಕ್ಕಳು ಹಾಗೂ ಯುವಕರಿಗಾಗಿ ಗೋಣಿ ಚೀಲ ಓಟ, ಹಗ್ಗಜಗ್ಗಾಟ, ಬೆಡ್ಚೆಂಡು ಆಟ ಸೇರಿದಂತೆ ಹಲವು ಸ್ಪರ್ಧೆಗಳು ನಡೆದವು. ಮಹಿಳೆಯರಿಗಾಗಿ ವಿಶೇಷವಾಗಿ ಸೊಪ್ಪಿನ ಆಟ ಆಯೋಜಿಸಲಾಗಿದ್ದು, ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡರು.


ಮಕ್ಕಳ ಹಾಗೂ ಅತಿಕಿರಿಯ ಮಕ್ಕಳಿಗಾಗಿ ಕಪ್ಪೆ ಜಿಗಿತ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಪುಟಾಣಿ ಮಕ್ಕಳಿಂದ ಹಿಡಿದು ಮಹಿಳೆಯರು ಹಾಗೂ ಯುವಕರವರೆಗೆ ಎಲ್ಲರೂ ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು.


ಶ್ರೀಕೃಷ್ಣ ಜನ್ಮಾಷ್ಟಮಿಯ ಧಾರ್ಮಿಕ ಆಚರಣೆಗಳ ಜೊತೆಗೆ ಇಂತಹ ಸಾಂಪ್ರದಾಯಿಕ ಹಾಗೂ ಮನರಂಜನಾ ಸ್ಪರ್ಧೆಗಳ ಆಯೋಜನೆಯ ಮೂಲಕ ಮಠದ ಆವರಣದಲ್ಲಿ ಹಬ್ಬದ ವಾತಾವರಣ ಮತ್ತಷ್ಟು ಕಳೆಗಟ್ಟಿತು. ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ಪರ್ಧಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು.


 

Ads on article

Advertise in articles 1

advertising articles 2

Advertise under the article