-->
ಸರಳೇಬೆಟ್ಟು ವಾರ್ಡಿನ ಕೊರಗ ಕಾಲನಿಯಲ್ಲಿ ಬಿಜೆಪಿ ಎಸ್‌ಟಿ ಮೋರ್ಚಾದಿಂದ ರಕ್ಷಾ ಬಂಧನ

ಸರಳೇಬೆಟ್ಟು ವಾರ್ಡಿನ ಕೊರಗ ಕಾಲನಿಯಲ್ಲಿ ಬಿಜೆಪಿ ಎಸ್‌ಟಿ ಮೋರ್ಚಾದಿಂದ ರಕ್ಷಾ ಬಂಧನ


ಉಡುಪಿ ಬಿಜೆಪಿ ಜಿಲ್ಲಾ ಎಸ್‌ಟಿ ಮೋರ್ಚಾ ವತಿಯಿಂದ ಸರಳೇಬೆಟ್ಟು ವಾರ್ಡಿನ ಕೊರಗರ ಕಾಲನಿಯಲ್ಲಿ ಕೊರಗ ಸಮುದಾಯದ ಬಂಧುಗಳೊಂದಿಗೆ ರಕ್ಷಾ ಬಂಧನ ಕಾರ್ಯಕ್ರಮವನ್ನು ಆಚರಿಸಲಾಯಿತು.


ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಅವರು ಕೊರಗ ಸಮುದಾಯದ ವಸಂತ ಹಾಗೂ ಪದ್ಮ ಅವರೊಂದಿಗೆ ಸೇರಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ರಕ್ಷಾ ಬಂಧನದ ಮಹತ್ವ ಹಾಗೂ ಅಣ್ಣ-ತಂಗಿ, ಅಕ್ಕ-ತಮ್ಮನ ಬಾಂಧವ್ಯದ ಕುರಿತು ಮಾಹಿತಿ ನೀಡಲಾಯಿತು.

ಉಡುಪಿ ಜಿಲ್ಲಾ ಎಸ್‌ಟಿ ಮೋರ್ಚಾ ಅಧ್ಯಕ್ಷ ಭುಜಂಗ ನಾಯ್ಕ್ ಮಣಿಪಾಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಉಮೇಶ್ ಎ. ನಾಯ್ಕ್ ಚೇರ್ಕಾಡಿ, ಸರಳೇಬೆಟ್ಟು ವಾರ್ಡಿನ ಮಾಜಿ ನಗರಸಭಾ ಸದಸ್ಯೆ ವಿಜಯಲಕ್ಷ್ಮಿ, ಜಿಲ್ಲಾ ಎಸ್‌ಟಿ ಮೋರ್ಚಾ ಉಪಾಧ್ಯಕ್ಷೆ ಸುಭೇದ ರವಿ, ಪ್ರಧಾನ ಕಾರ್ಯದರ್ಶಿ ಸುಭಾಷ್ ನಾಯ್ಕ್, ಸರಳೇಬೆಟ್ಟು ವಾರ್ಡಿನ ಬೂತ್ ಅಧ್ಯಕ್ಷ ನಿತ್ಯಾನಂದ ಶೆಣೈ ಸೇರಿದಂತೆ ಎಸ್‌ಟಿ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಕೊರಗ ಸಮುದಾಯದ ಮುಖಂಡ ವಿಜಯ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕೊರಗ ಸಮುದಾಯಕ್ಕೆ ವಿಜಯಲಕ್ಷ್ಮಿ ಅವರು ನೀಡಿದ 50 ಕುರ್ಚಿಗಳನ್ನು ದಿನಕರ ಶೆಟ್ಟಿ ಹೆರ್ಗ ಅವರು ಹಸ್ತಾಂತರಿಸಿದರು. ಸರಳೇಬೆಟ್ಟು ವಾರ್ಡಿನ ಗುರುರಾಜ ಕಾರ್ಯಕ್ರಮ ನಿರೂಪಿಸಿದರು.

Ads on article

Advertise in articles 1

advertising articles 2

Advertise under the article