-->
 ಕಾರ್ಕಳ ಮಾರಿಯಮ್ಮ ದೇವಸ್ಥಾನ ಮೊಕ್ತೇಸರ ಗೋಪಾಲಕೃಷ್ಣ ರಾವ್ ನಿಧನ

ಕಾರ್ಕಳ ಮಾರಿಯಮ್ಮ ದೇವಸ್ಥಾನ ಮೊಕ್ತೇಸರ ಗೋಪಾಲಕೃಷ್ಣ ರಾವ್ ನಿಧನ


ಕಾರ್ಕಳ ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಗೋಪಾಲಕೃಷ್ಣ ರಾವ್ ಅವರು ನಿಧನರಾಗಿದ್ದು, ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರು ಸಂತಾಪ ಸೂಚಿಸಿದ್ದಾರೆ. 

ಹಿರಿಯರಾದ ಗೋಪಾಲಕೃಷ್ಣ ರಾವ್ ಅವರು ಕಾರ್ಕಳ ಶ್ರೀ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರರಾಗಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಅವರು ನೀಡಿದ ಸೇವೆ ಸ್ಮರಣೀಯವಾಗಿದೆ, ಅವರ ಮಾರ್ಗದರ್ಶನದಲ್ಲಿ ನಡೆದ ದೇವಸ್ಥಾನದ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವವು ಅವಿಸ್ಮರಣೀಯವಾಗಿದೆ. ಪರಮ ದೈವ ಭಕ್ತರಾಗಿದ್ದು ಧರ್ಮ ಕಾರ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ  ಅವರ ಅಗಲುವಿಕೆಯಿಂದ ಸಮಾಜವು ಒಬ್ಬ ಹಿರಿಯ ಧಾರ್ಮಿಕ ಮುಂದಾಳುವನ್ನು ಕಳೆದುಕೊಂಡಂತಾಗಿದೆ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ಬಂಧು ಮಿತ್ರರಿಗೆ ಈ ದುಃಖವನ್ನು ಭರಿಸುವ ಶಕ್ತಿಯು ಭಗವಂತನು ಕರುಣಿಸಲಿ ಎಂದು ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article