-->
 ಶಿರ್ವ ಹಿಂದೂ ಪ್ರೌಢ  ಶಾಲೆಯಲ್ಲಿ ‘ಸಾಂಸ್ಕೃತಿಕ ಸೌರಭ’

ಶಿರ್ವ ಹಿಂದೂ ಪ್ರೌಢ ಶಾಲೆಯಲ್ಲಿ ‘ಸಾಂಸ್ಕೃತಿಕ ಸೌರಭ’


ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಹಾಗೂ ಹಿಂದೂ ಪ್ರೌಢ ಶಾಲೆ, ಶಿರ್ವ ಇವರ ಸಹಯೋಗದಲ್ಲಿ ‘ಸಾಂಸ್ಕೃತಿಕ ಸೌರಭ’ ಕಾರ್ಯಕ್ರಮವು ಇಂದು ಶಿರ್ವ ಹಿಂದೂ ಪ್ರೌಢ ಶಾಲೆಯ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕನ್ನಡ ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳ ಮಹತ್ವವನ್ನು ಒತ್ತಿಹೇಳಿದರು.



ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಕಾಪು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಮಟ್ಟಾರು ರತ್ನಾಕರ್ ಹೆಗ್ಡೆ, ಆಡಳಿತಾಧಿಕಾರಿ ವೈ. ಭಾಸ್ಕರ್ ಶೆಟ್ಟಿ, ಪ್ರಾಂಶುಪಾಲರಾದ ಸುಜಾತಾ, ಮುಖ್ಯ ಶಿಕ್ಷಕಿ ವಸಂತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಹಾಗೂ ಕಲಾಸಕ್ತರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಕಲಾ ಪ್ರದರ್ಶನಗಳು ಗಮನ ಸೆಳೆದವು.  

Ads on article

Advertise in articles 1

advertising articles 2

Advertise under the article