ಮುದರಂಗಡಿ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತಿಬ್ಬರ ಬಂಧನ
Wednesday, August 12, 2026
ಕಾಪು ಮುದರಂಗಡಿಯಲ್ಲಿ ಉದ್ಯಮಿ ಡೇವಿಡ್ ಡಿಸೋಜಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಎರ್ಮಾಳ್ ತೆಂಕ ನಿವಾಸಿ ಚಿರಾಗ್ ಪೂಜಾರಿ (26) ಹಾಗೂ ಮೊಹಮ್ಮದ್ ಇರ್ಷಾದ್ (43) ಬಂಧಿತರು. ಕೃತ್ಯಕ್ಕೆ ಹಣ ವರ್ಗಾವಣೆ ಸೇರಿದಂತೆ ಸಹಕಾರ ನೀಡಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ.
ಆಗಸ್ಟ್ 7ರಂದು ಮಧ್ಯಾಹ್ನ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್ಪ್ರೈಸಸ್‌ನ ಮಾಲಕ ಡೇವಿಡ್ ಡಿಸೋಜಾ ಅವರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆ ಮುಂದುವರಿದಿದ್ದು, ಈಗಾಗಲೇ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ದಸ್ತಗಿರಿಗೊಳಿಸಿದ್ದರು. ಹಣ ವರ್ಗಾವಣೆ ಮಾಡಲು ಸಹಾಯ ಮಾಡಿ ಹಾಗೂ ಆರೋಪಿಗಳಿಗೆ ಸಹಕರಿಸಿದ ಆರೋಪದ ಮೇರೆಗೆ ಇದೀಗ ಮತ್ತೆ ಇಬ್ಬರನ್ನು ಬಂಧಿಸಲಾಗಿದೆ.