-->
 ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ


ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.


ನಾಗರ ಪಂಚಮಿ ಅಂಗವಾಗಿ ದೇವಸ್ಥಾನದ ಆವರಣದಲ್ಲಿರುವ ಕ್ಷೇತ್ರದ ಮೂಲನಾಗ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಮೂಲನಾಗ ಸನ್ನಿಧಿಯನ್ನು ವಿಶೇಷವಾಗಿ ಅಲಂಕರಿಸಲಾಗಿದ್ದು, ತಂಬಿಲ ಸೇವೆ ಸೇರಿದಂತೆ ವಿವಿಧ ಸೇವೆಗಳು ಭಕ್ತಿಭಾವದಿಂದ ಜರುಗಿದವು.

ಬೆಳಗ್ಗಿನಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಮೂಲನಾಗ ಸನ್ನಿಧಿಗೆ ಆಗಮಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ದೇವರಿಗೆ ಕ್ಷೀರಾಭಿಷೇಕ (ಹಾಲಿನ ಅಭಿಷೇಕ), ಸೀಯಾಳ (ಎಳನೀರು) ಅಭಿಷೇಕ ನೆರವೇರಿಸಿ, ಅರಿಶಿನ ಪುಡಿ ಹಾಗೂ ಹೂವುಗಳನ್ನು ಸಮರ್ಪಿಸಿ ಪ್ರಾರ್ಥಿಸಿದರು.


 

Ads on article

Advertise in articles 1

advertising articles 2

Advertise under the article