ಉದ್ಯಾವರ ಪಾಪನಾಸಿನಿ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
Wednesday, August 05, 2026
ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಉದ್ಯಾವರ ಪಿತ್ರೋಡಿ ತಾಂಡೆಲ್ ಗೆಸ್ಟ್ ಹೌಸ್ ಸಮೀಪದ ಪಾಪನಾಸಿನಿ ಹೊಳೆಯಲ್ಲಿ ಸುಮಾರು 30 ರಿಂದ 35 ವರ್ಷ ಪ್ರಾಯದ ಅಪರಿಚಿತ ಪುರುಷನ ಕೊಳೆತ ಸ್ಥಿತಿಯ ಶವ ಪತ್ತೆಯಾಗಿದೆ.
ಸ್ಥಳೀಯರ ಮಾಹಿತಿಯ ಮೇರೆಗೆ ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಉಡುಪಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಈ ಕಾರ್ಯದಲ್ಲಿ ಸಮಾಜ ಸೇವಕ ನಿತ್ಯಾನಂದ ಒಳಕಾಡು ಸಹಕರಿಸಿದರು.
ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತನ ಬಗ್ಗೆ ಯಾವುದೇ ಮಾಹಿತಿ ಅಥವಾ ಗುರುತು ತಿಳಿದಿರುವ ಸಾರ್ವಜನಿಕರು ಉಡುಪಿ ಜಿಲ್ಲಾ ಕಾಪು ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.