-->
 ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಜಾರ್ಜ್ ಸಾಮ್ಯುಯೆಲ್ ನಿಧನ

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಜಾರ್ಜ್ ಸಾಮ್ಯುಯೆಲ್ ನಿಧನ


ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಇದರ ಉಪಾಧ್ಯಕ್ಷ ಜಾರ್ಜ್ ಸಾಮ್ಯುಯೆಲ್ (79) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮಣಿಪಾಲ ಆಸ್ಪತ್ರೆಯಲ್ಲಿ  ನಿಧನರಾದರು.

ಲಯನ್ಸ್ ಕ್ಲಬ್ ಉದ್ಯಾವರದ ಸಕ್ರಿಯ ಸದಸ್ಯರಾಗಿದ್ದ ಅವರು, ಲಯನ್ಸ್ ಜಿಲ್ಲೆ 317 ಸಿ ಇದರ ಮಾಜಿ ಸಂಪುಟ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೆ, ಪ್ರೊಟೆಸ್ಟೆಂಟ್ ಕ್ರೈಸ್ತ ಸಮುದಾಯದ ಮುಖಂಡರಾಗಿ ವಿವಿಧ ಸಾಮಾಜಿಕ ಹಾಗೂ ಸಮುದಾಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

ಜಾರ್ಜ್ ಸಾಮ್ಯುಯೆಲ್ ಅವರು ಪತ್ನಿ ಮಕ್ಕಳನ್ನು ಅಗಲಿದ್ದಾರೆ.

ಜಾರ್ಜ್ ಸಾಮ್ಯುಯೆಲ್ ಅವರ ನಿಧನಕ್ಕೆ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಲಯನ್ಸ್ ಜಿಲ್ಲಾ ಗವರ್ನರ್ ರಾಜೀವ್ ಕೋಟ್ಯಾನ್, ಲಯನ್ಸ್ ಕ್ಲಬ್ ಸದಸ್ಯರು ಹಾಗೂ ಪ್ರೊಟೆಸ್ಟೆಂಟ್ ಕ್ರೈಸ್ತ ಸಮುದಾಯದ ಮುಖಂಡರು ಮತ್ತು ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Ads on article

Advertise in articles 1

advertising articles 2

Advertise under the article