ಕಾಪು ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ
Friday, August 28, 2026
ಕಾಪು ತಾಲೂಕು ಆಡಳಿತ ಹಾಗೂ ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವು ಶುಕ್ರವಾರ ಕಾಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು, ಸಮಾಜದಲ್ಲಿ ಸಮಾನತೆ, ಸಹೋದರತೆ ಹಾಗೂ ಸಾಮಾಜಿಕ ಜಾಗೃತಿಯನ್ನು ಮೂಡಿಸುವಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಕೊಡುಗೆ ಅಪಾರವಾಗಿದೆ. ಅವರ ಆದರ್ಶ ಮತ್ತು ಚಿಂತನೆಗಳನ್ನು ಇಂದಿನ ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಪು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಗಾಂವ್ಕರ್, ಪತ್ರಕರ್ತ ರಾಕೇಶ್ ಕುಂಜೂರು, ಕಾಪು ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತಾ, ಉಪ ತಹಶೀಲ್ದಾರ್ ದೇವಕಿ ಸೇರಿದಂತೆ ಕಾಪು ತಾಲೂಕಿನ ವಿವಿಧ ಬಿಲ್ಲವರ ಸಂಘಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

.jpeg)
