-->
 ಅಂಬಲಪಾಡಿ ಬಿಲ್ಲವ ಸೇವಾ ಸಂಘದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

ಅಂಬಲಪಾಡಿ ಬಿಲ್ಲವ ಸೇವಾ ಸಂಘದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ


ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಆಶ್ರಯದಲ್ಲಿ ಸಂಘದ ಮಹಿಳಾ ಘಟಕದ ವತಿಯಿಂದ 10ನೇ ವರ್ಷದ ‘ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ’ಯು ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಭಕ್ತಿಭಾವದಿಂದ ನೆರವೇರಿತು.

ಪೂಜಾ ಕಾರ್ಯಕ್ರಮವು ದಯಾಕರ ಶಾಂತಿ ಬನ್ನಂಜೆ ಅವರ ಪೌರೋಹಿತ್ಯದಲ್ಲಿ ನಡೆಯಿತು. ಮಹಿಳೆಯರು ಹಾಗೂ ಭಕ್ತರು ಸಾಮೂಹಿಕವಾಗಿ ಶ್ರೀ ವರಮಹಾಲಕ್ಷ್ಮೀ ದೇವಿಯ ಪೂಜೆಯಲ್ಲಿ ಪಾಲ್ಗೊಂಡರು.

ಮಹಾಪೂಜೆಯ ಬಳಿಕ ಅನ್ನ ಸಂತರ್ಪಣೆ ನಡೆಯಿತು. ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಮಹಿಳಾ ಘಟಕದ ಸದಸ್ಯೆಯರು ಹಾಗೂ ಭಕ್ತರು ಭಾಗವಹಿಸಿದ್ದರು.

Ads on article

Advertise in articles 1

advertising articles 2

Advertise under the article