ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ದುಷ್ಕರ್ಮಿಗಳ ಪತ್ತೆಗೆ ತೀವ್ರ ಶೋಧ
Friday, August 07, 2026
ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾ. ಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಕಾಪು ಕಟಪಾಡಿ ಉಡುಪಿ ಪರಿಸರದಲ್ಲಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಸಿಸಿ ಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ. ಅಲ್ಲದೇ ಸಂಶಯಾಸ್ಪದ ರೀತಿಯಲ್ಲಿ ಓಡಾಡುವ ವಾಹನಗಳ ಮೇಲೆಯೂ ಪೊಲೀಸರು ಕಣ್ಣಿಟ್ಟಿದ್ದಾರೆ.
ಇಂದು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಡೇವಿಡ್ ಡಿಸೋಜ ಅವರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡ ಡೇವಿಡ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಡೇವಿಡ್ ಅವರ ಮರಣೊತ್ತರ ಪರೀಕ್ಷೆ ನಡೆಸಲಾಗಿದೆ.