-->
 ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಸಾಧನಾ ಪುರಸ್ಕಾರ

ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಸಾಧನಾ ಪುರಸ್ಕಾರ


2025-26ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಕುಕ್ಕಿಕಟ್ಟೆಯ ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘ ನಿಯಮಿತಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ವತಿಯಿಂದ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ 2025-26ನೇ ಸಾಲಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಶ್ರೀಧರ ದೇವಾಡಿಗ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವಿಜಯಲಕ್ಷ್ಮೀ ಮಾರ್ಪಳ್ಳಿ ಅವರಿಗೆ ಸಾಧನಾ ಪುರಸ್ಕಾರ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಅಲೆವೂರು ದಿನೇಶ್ ಕಿಣಿ, ನಿರ್ದೇಶಕರಾದ  ರಮಾದೇವಿ, ದಿನೇಶ್ ನಾಯ್ಕ್ ಹಾಗೂ ಸದಾನಂದ ಕಾಂಚನ್ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ, ಭಾಸ್ಕರ ಕೋಟ್ಯಾನ್, ವಾದಿರಾಜ ಶೆಟ್ಟಿ, ಮೋಹನಪ್ಪ ಶೆಟ್ಟಿ, ಅಶೋಕ್ ಶೆಟ್ಟಿ ಹಾಗೂ ರಾಜೇಶ್ ರಾವ್ ಪಾಂಗಾಳ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಇಲಾಖೆಯ ಉಪನಿಬಂಧಕರಾದ ರಮೇಶ್ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಇಲಾಖೆಯ ಉಪನಿಬಂಧಕರಾದ ಲಾವಣ್ಯ ಕೆ.ಆರ್. ಉಪಸ್ಥಿತರಿದ್ದರು.


Ads on article

Advertise in articles 1

advertising articles 2

Advertise under the article