-->
ಉಡುಪಿ ಜಿಲ್ಲೆಯಲ್ಲಿ ನಾಳೆ ಶಾಲೆಗಳಿಗೆ ರಜೆ

ಉಡುಪಿ ಜಿಲ್ಲೆಯಲ್ಲಿ ನಾಳೆ ಶಾಲೆಗಳಿಗೆ ರಜೆ


ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಭಾರತೀಯ ಹವಾಮಾನ ಇಲಾಖೆಯ ಯೆಲ್ಲೋ ಅಲರ್ಟ್‌ ಮುನ್ಸೂಚನೆ ಹಿನ್ನೆಲೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಗಸ್ಟ್ 4ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಆದರೆ ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಕಾಲೇಜುಗಳಲ್ಲಿ ಎಂದಿನಂತೆ ತರಗತಿಗಳು ನಡೆಯಲಿವೆ.

ಜಿಲ್ಲಾಧಿಕಾರಿಗಳು ಕಾಲೇಜುಗಳ ಪ್ರಾಂಶುಪಾಲರಿಗೆ ಹಲವು ಮುನ್ನೆಚ್ಚರಿಕಾ ಸೂಚನೆಗಳನ್ನು ನೀಡಿದ್ದಾರೆ. ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯಗೊಳಿಸಬಾರದು. ಕಾಲೇಜಿಗೆ ಬರುವ ಹಾಗೂ ಮನೆಗೆ ಮರಳುವ ವೇಳೆ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಅಪಾಯಕಾರಿ ಪ್ರದೇಶಗಳಿಂದ ಸಂಚರಿಸಬೇಕಾದ ವಿದ್ಯಾರ್ಥಿಗಳು ಅಗತ್ಯವಿದ್ದರೆ ಮನೆಯಲ್ಲೇ ಸುರಕ್ಷಿತವಾಗಿರಲು ಅವಕಾಶ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ.

ಅಜೀರ್ಣಾವಸ್ಥೆಯಲ್ಲಿರುವ ಕಟ್ಟಡಗಳನ್ನು ತರಗತಿಗಳಿಗೆ ಬಳಸಬಾರದು. ವಿದ್ಯಾರ್ಥಿಗಳು ಕೆರೆ, ನದಿ, ತಗ್ಗು ಪ್ರದೇಶ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಪೋಷಕರು ಹಾಗೂ ಕಾಲೇಜು ಆಡಳಿತ ಎಚ್ಚರಿಕೆ ವಹಿಸಬೇಕು. ವಿದ್ಯಾರ್ಥಿಗಳ ಸಾರಿಗೆ ವ್ಯವಸ್ಥೆಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಜೊತೆಗೆ, ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವಂತೆ ಸೂಚಿಸಲಾಗಿದೆ.

ಶಾಲೆಗಳಿಗೆ ಘೋಷಿಸಿರುವ ರಜೆಯಿಂದ ಉಂಟಾಗುವ ಬೋಧನಾ ಅವಧಿಯ ನಷ್ಟವನ್ನು ಸರಿದೂಗಿಸಲು ಶನಿವಾರ ಮಧ್ಯಾಹ್ನ ಅಥವಾ ಭಾನುವಾರ ಹೆಚ್ಚುವರಿ ತರಗತಿಗಳನ್ನು ನಡೆಸಲು ಸರ್ಕಾರ ಸೂಚಿಸಿದೆ.

ತುರ್ತು ಪರಿಸ್ಥಿತಿಯಲ್ಲಿ ಸಂಪರ್ಕಿಸಲು:

ಜಿಲ್ಲೆ 24x7 ಕಂಟ್ರೋಲ್ ರೂಂ: 1077 / 0820-2574802

ಉಡುಪಿ ತಹಶೀಲ್ದಾರ್ ಕಚೇರಿ: 0820-2520417

ಕಾರ್ಕಳ: 08258-230201

ಕುಂದಾಪುರ: 08254-230357

ಬ್ರಹ್ಮಾವರ: 0820-2560494

ಬೈಂದೂರು: 08254-251657

ಕಾಪು: 0820-2551444

ಹೆಬ್ರಿ: 08253-250201

ಉಡುಪಿ ನಗರಸಭೆ: 0820-2520306

Ads on article

Advertise in articles 1

advertising articles 2

Advertise under the article