-->
ಮಲ್ಪೆಯ ರೂಪದರ್ಶಿ ನೇಣಿಗೆ ಶರಣು

ಮಲ್ಪೆಯ ರೂಪದರ್ಶಿ ನೇಣಿಗೆ ಶರಣು


ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಸಂಭವಿಸಿದೆ.

ಕಲ್ಮಾಡಿ ನಿವಾಸಿ ರತ್ನಾ ಅವರ ಪುತ್ರಿ ಕೃತಿ ಬಂಗೇರಾ (27) ಎಂದು ಗುರುತಿಸಲಾಗಿದೆ.

ಕೃತಿ ಅವರು ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು ಉಡುಪಿಯ ಕಡಿಯಾಳಿ ಬಳಿಯ ಖಾಸಗಿ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಳೆದ ಸುಮಾರು ಐದು ತಿಂಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು ಎನ್ನಲಾಗಿದೆ.

ಆಗಸ್ಟ್ 6ರಂದು ತಾಯಿ ರತ್ನ ಅವರು ಕೆಲಸದ ನಿಮಿತ್ತ ಮಲ್ಪೆಗೆ ತೆರಳಿದ್ದು ಎರಡನೇ ಪುತ್ರಿಯೂ ಕೆಲಸದ ಕಾರಣ ಉಡುಪಿಗೆ ಹೋಗಿದ್ದರು. ಮಧ್ಯಾಹ್ನ ಸುಮಾರು 1 ಗಂಟೆಗೆ ಮನೆಗೆ ಹಿಂದಿರುಗಿದ ವೇಳೆ, ಕೃತಿ ತಾಯಿಯನ್ನು ಮನೆಯ ಹೊರಗೆ ಕಳುಹಿಸಿ ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದಾರೆ.

ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ರತ್ನ ಅವರು ತಮ್ಮ ಸಹೋದರ ಚಂದ್ರ ಅವರಿಗೆ ಕರೆ ಮಾಡಿ ಸ್ಥಳಕ್ಕೆ ಕರೆದಿದ್ದಾರೆ. ಬಳಿಕ ಬಾಗಿಲು ಒಡೆದು ಮನೆಯೊಳಗೆ ಪ್ರವೇಶಿಸಿದಾಗ, ಬೆಡ್ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕೃತಿ ಕಳೆದ ಹಲವಾರು ದಿನಗಳಿಂದ ಒತ್ತಡದಲ್ಲಿದ್ದಳು ಎನ್ನಲಾಗಿದ್ದು ಇದೆ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಶಯಿಸಲಾಗಿದೆ.

ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article