ಬಸ್ಸು ಡಿಕ್ಕಿ: ಮೃತ ಮಹಿಳೆ ಮಾಜಿ ನಗರಸಭಾ ಉಪಾಧ್ಯಕ್ಷೆ ಲಕ್ಷ್ಮಿ ಮಂಜು ಕೊಳ
Saturday, August 01, 2026
ಉಡುಪಿ ಲಯನ್ಸ್ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಗುರುತು ಪತ್ತೆಯಾಗಿದೆ. ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮಿಮಂಜು ಕೊಳ ಎಂದು ಗುರುತಿಸಲಾಗಿದೆ.
ಇಂದು ಮಧ್ಯಾಹ್ನ ನೈವೇದ್ಯ ಹೋಟೆಲ್ ಸಮೀಪ ರಸ್ತೆ ದಾಟುತ್ತಿದ ವೇಳೆ ಬಸ್ಸುಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ತಲೆ ಛಿದ್ರಗೊಂಡು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ಬಿಜೆಪಿ ಮುಖಂಡ ಮಂಜು ಕೊಳ ಅವರ ಪತ್ನಿ. ಇಂದು ಮಣಿಪಾಲ ಮಾಧವ ಕೃಪಾ ಶಾಲೆಯಲ್ಲಿ ನಡೆದ ಶಿಕ್ಷಕ ರಕ್ಷಕ ಸಭೆ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಮೃತರು ಪತಿ ಮಂಜು ಕೊಳ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.