ಕಿನ್ನಿಮುಲ್ಕಿಯಲ್ಲಿ ದಾಳಿಂಬೆ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ
Saturday, August 22, 2026
ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಕಿನ್ನಿಮುಲ್ಕಿ ಬಳಿ ದಾಳಿಂಬೆ ಹಣ್ಣು ಸಾಗಿಸುತ್ತಿದ್ದ ಪಿಕಪ್ ವಾಹನ ಟಯರ್ ಬ್ಲಾಸ್ಟ್ ಆಗಿ ಡಿವೈಡರ್ ಏರಿ ಪಲ್ಟಿಯಾದ ಘಟನೆ ನಡೆದಿದೆ.
ಮಹಾರಾಷ್ಟ್ರದ ಸಂಗೋಲ ಸಮೀಪದಿಂದ ಕೇರಳದ ಕೊಚ್ಚಿಕೋಡ್‌ಗೆ ಸುಮಾರು ಎರಡೂವರೆ ಟನ್ ದಾಳಿಂಬೆ ಹಣ್ಣುಗಳನ್ನು ಸಾಗಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮಾರ್ಗಮಧ್ಯೆ ಪಿಕಪ್ ವಾಹನದ ಟಯರ್ ಏಕಾಏಕಿ ಬ್ಲಾಸ್ಟ್ ಆಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ವಾಹನ ಡಿವೈಡರ್‌ಗೆ ಏರಿ ಪಲ್ಟಿಯಾಗಿದೆ.
ಅಪಘಾತದ ರಭಸಕ್ಕೆ ಪಿಕಪ್‌ನಲ್ಲಿದ್ದ ದಾಳಿಂಬೆ ಹಣ್ಣುಗಳು ರಸ್ತೆಯಲ್ಲೆಲ್ಲಾ ಚೆಲ್ಲಾಪಿಲ್ಲಿಯಾಗಿವೆ. ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಾಲಕ ಹಾಗೂ ಸಹೋದ್ಯೋಗಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.