ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನೆ: ವೃಂದಾವನಕ್ಕೆ ವಿಶೇಷ ಪೂಜೆ
Monday, August 10, 2026
ಆಷಾಢ ಕೃಷ್ಣ ಪಕ್ಷದ ದ್ವಾದಶಿಯಂದು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನಾ ಮಹೋತ್ಸವವು ನೆರವೇರಿತು.
ಶ್ರೀಕೃಷ್ಣ ಮಠದ ಸಮುಚ್ಚಯದಲ್ಲಿರುವ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ವೃಂದಾವನಕ್ಕೆ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಗೋ ಪೂಜೆಯನ್ನು ನೆರವೇರಿಸಿ, ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸಿದರು.
ನಂತರ ಅನುಗ್ರಹ ಸಂದೇಶ ನೀಡಿದ ಶ್ರೀಪಾದರು, ಸನಾತನ ಧರ್ಮದ ಪರಂಪರೆ, ಗುರುಗಳ ಅನುಗ್ರಹ ಹಾಗೂ ಭಗವಂತನ ಆರಾಧನೆಯ ಮಹತ್ವವನ್ನು ವಿವರಿಸಿದರು. ಗುರುಗಳ ಸ್ಮರಣೆ ಮತ್ತು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಸಮಾಜದಲ್ಲಿ ಧಾರ್ಮಿಕ ಹಾಗೂ ಸಾತ್ವಿಕ ವಾತಾವರಣ ನಿರ್ಮಾಣವಾಗುತ್ತದೆ ಎಂದು ಆಶಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಠದ ಸಿಬ್ಬಂದಿ, ಭಕ್ತರು ಹಾಗೂ ವಿವಿಧ ಧಾರ್ಮಿಕ ಮುಖಂಡರು ಉಪಸ್ಥಿತರಿದ್ದರು.
.jpeg)
