ಉಡುಪಿ ಶ್ರೀಕೃಷ್ಣ ಮಠಕ್ಕೆ ಅಣ್ಣಾಮಲೈ ಭೇಟಿ
Wednesday, August 12, 2026
ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
ಮಠಕ್ಕೆ ಆಗಮಿಸಿದ ಅಣ್ಣಾಮಲೈ ಅವರನ್ನು ಮಠದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಅವರು ಕನಕ ಕಿಂಡಿಯ ಮೂಲಕ ದೇವರ ದರ್ಶನ ಪಡೆದು ಬಳಿಕ ದೇಗುಲದ ಒಳಾಂಗಣದಲ್ಲಿ ಶ್ರೀಕೃಷ್ಣ ದೇವರ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.ಈ ವೇಳೆ ಅಣ್ಣಾಮಲೈ ಅವರನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು.