-->
ಬಿಜೆಪಿ ಜಿಲ್ಲಾ ಕಾರ್ಯಾಲಯ ಮಾಜಿ ಕಾರ್ಯದರ್ಶಿ ಸುರೇಶ್ ಶೇರಿಗಾರ್ ಅಲೆವೂರು ನಿಧನ: ಉಡುಪಿ ಜಿಲ್ಲಾ ಬಿಜೆಪಿ ಸಂತಾಪ

ಬಿಜೆಪಿ ಜಿಲ್ಲಾ ಕಾರ್ಯಾಲಯ ಮಾಜಿ ಕಾರ್ಯದರ್ಶಿ ಸುರೇಶ್ ಶೇರಿಗಾರ್ ಅಲೆವೂರು ನಿಧನ: ಉಡುಪಿ ಜಿಲ್ಲಾ ಬಿಜೆಪಿ ಸಂತಾಪ


ಭಾರತೀಯ ಜನತಾ ಪಾರ್ಟಿಯ ಉಡುಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಯಾಗಿ ಸುಮಾರು 35 ವರ್ಷಕ್ಕೂ ಮಿಕ್ಕಿ ಸೇವೆ ಸಲ್ಲಿಸಿರುವ ಸುರೇಶ್ ಶೇರಿಗಾರ್ ಅಲೆವೂರು (65) ನಿಧನರಾಗಿದ್ದಾರೆ. 

ಬಿಜೆಪಿ ಹಿರಿಯ ನಾಯಕರಾಗಿದ್ದ ಡಾ! ವಿ.ಎಸ್. ಆಚಾರ್ಯ ಹಾಗೂ ಸೋಮಶೇಖರ್ ಭಟ್ ಅವರ ನಿಕಟವರ್ತಿಯಾಗಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರೂ ಆಗಿದ್ದರು. ಸುರೇಶ್ ಶೇರಿಗಾರ್ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಅವರ ಕರ್ತವ್ಯ ನಿಷ್ಠೆ, ಕಾರ್ಯ ತತ್ಪರತೆ ಶ್ಲಾಘನೀಯ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಬಂಧು ಮಿತ್ರರಿಗೆ ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುರೇಶ್ ಶೇರಿಗಾರ್ ಅಲೆವೂರು ನಿಧನಕ್ಕೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ಗುರ್ಮೆ ಸುರೇಶ್ ಶೆಟ್ಟಿ, ವಿ.ಸುನೀಲ್ ಕುಮಾರ್, ಯಶ್ಪಾಲ್ ಎ. ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಬಿಜೆಪಿ ಮುಖಂಡರುಗಳಾದ ಕೆ.ಉದಯ ಕುಮಾರ್ ಶೆಟ್ಟಿ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮಟ್ಟಾರ್ ರತ್ನಾಕರ ಹೆಗ್ಡೆ, ಕುಯಿಲಾಡಿ ಸುರೇಶ್ ನಾಯಕ್, ರವಿ ಅಮೀನ್, ದಿನಕರ ಬಾಬು, ಶಿಲ್ಪಾ ಜಿ. ಸುವರ್ಣ, ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್ ಸಹಿತ ಪಕ್ಷದ ಪ್ರಮುಖರು ಮತ್ತು ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

Ads on article

Advertise in articles 1

advertising articles 2

Advertise under the article