ಮೋದಿ ಹುಟ್ಟು ಹಬ್ಬಕ್ಕೆ ಉಡುಪಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಚೆಸ್ ಪಂದ್ಯಾಟ
ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಚೆಸ್ ಪಂದ್ಯಾಟ ಆಯೋಜಿಸಲಾಗಿದೆ.
ಉಡುಪಿ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಾರ್ಗದರ್ಶನದಲ್ಲಿ ಈ ಚೆಸ್ ಪಂದ್ಯಾಟ ನಡೆಯಲಿದೆ.
ಸೆ. 6ರಂದು ಕಾರ್ಕಳ ಬಂಡಿಮಠದ ಶ್ರೀ ಮೂಡು ಮಹಾಗಣಪತಿ ಕಲಾ ಮಂದಿರದಲ್ಲಿ, ಸೆ. 13ರಂದು ಕಾಪು ಹಳೆ ಮಾರಿಗುಡಿ ಸಭಾಂಗಣದಲ್ಲಿ, ಸೆ. 20ರಂದು ಉಡುಪಿಯ ಬೋರ್ಡ್ ಹೈಸ್ಕೂಲ್ ಸಭಾಂಗಣದಲ್ಲಿ, ಸೆ. 27ರಂದು ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಹಾಗೂ ಅ. 4ರಂದು ಬೈಂದೂರಿನ ತ್ರಾಸಿ ಅಣ್ಣಪ್ಪಯ್ಯ ಸಭಾ ಭವನದಲ್ಲಿ ನಡೆಯಲಿದೆ. ಎಲ್ಲಾ ಕೇಂದ್ರಗಳಲ್ಲೂ ಬೆಳಿಗ್ಗೆ 8 ಗಂಟೆಗೆ ಪಂದ್ಯ ಆರಂಭಗೊಳ್ಳಲಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡೋಲ್ಫ್ ಡಿ’ಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಕ್ಕಳಿಗೆ ಅವರವರ ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆಗೆ ಅವಕಾಶವಿದ್ದು, 1ನೇ ತರಗತಿಯಿಂದ 12ನೇ ತರಗತಿ ಮಕ್ಕಳು ಮಾತ್ರ ಕ್ಯೂ ಆರ್ ಕೋಡ್ ಬಳಸಿ, ಈ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಹುದಾಗಿದೆ. ಪಂದ್ಯಾಟದಲ್ಲಿ ಭಾಗವಹಿಸಲು ನೋಂದಣಿ ಮಾಡುವುದು ಕಡ್ಡಾಯವಾಗಿದ್ದು, ಯಾವುದೇ ನೋಂದಣಿ ಶುಲ್ಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ: 8197421962, 96866 53889 ಸಂಪರ್ಕಿಸಬಹುದು. ಉಚಿತ ನೋಂದಣಿ ಇರಲಿದೆ ಎಂದು ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿ’ಸೋಜಾ ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.
