ಉಡುಪಿ ಶ್ರೀಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ, ವಸತಿಗೃಹ ಲೋಕಾರ್ಪಣೆ
Monday, August 17, 2026
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಯಾತ್ರಿಕರ ಅನುಕೂಲಕ್ಕಾಗಿ ಶೀರೂರು ಮಠದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹವನ್ನು ಕರ್ನಾಟಕ ಬ್ಯಾಂಕ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ರಾಘವೇಂದ್ರ ಭಟ್ ಅವರು ದೀಪ ಬೆಳಗಿಸುವ ಮೂಲಕ ಲೋಕಾರ್ಪಣೆಗೊಳಿಸಿದರು.
ಯಾತ್ರಿಕರ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವ ಉದ್ದೇಶದಿಂದ ಸುಮಾರು ರೂ.60 ಲಕ್ಷ ಅಂದಾಜು ವೆಚ್ಚದಲ್ಲಿ ಈ ಸೌಲಭ್ಯಗಳನ್ನು ನಿರ್ಮಿಸಲಾಗಿದೆ. ಶ್ರೀಕೃಷ್ಣ ಮಠಕ್ಕೆ ದೇಶದ ವಿವಿಧ ಭಾಗಗಳಿಂದ ಆಗಮಿಸುವ ಭಕ್ತರು ಹಾಗೂ ಯಾತ್ರಿಕರಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ.
ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು, ಮ್ಯಾನೇಜರ್ ವಾಸುದೇವ ಆಚಾರ್ಯ, ಕರ್ನಾಟಕ ಬ್ಯಾಂಕ್ ಪ್ರಧಾನ ಕಚೇರಿ ಮಂಗಳೂರಿನ ಉಪ ಮಹಾಪ್ರಬಂಧಕರಾದ ವಾದಿರಾಜ್ ಭಟ್, ಕರ್ನಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ಮಹಾಪ್ರಬಂಧಕರು ಹಾಗೂ ಪ್ರಾದೇಶಿಕ ಮುಖ್ಯಸ್ಥರಾದ ರಮೇಶ್ ವೈದ್ಯ, ಕರ್ನಾಟಕ ಬ್ಯಾಂಕ್ ಕಾರ್‌ಸ್ಟ್ರೀಟ್ (ರಥಬೀದಿ) ಶಾಖೆಯ ಹಿರಿಯ ಶಾಖಾ ವ್ಯವಸ್ಥಾಪಕರಾದ ಪ್ರಶಾಂತ್ ಎಂ. ರಾವ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಯಾತ್ರಿಕರ ಸೇವೆಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಕಲ್ಪಿಸುವ ಮೂಲಕ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನಷ್ಟು ಉತ್ತಮ ಸೌಲಭ್ಯ ಒದಗಿಸುವ ಕಾರ್ಯಕ್ಕೆ ಈ ಹೊಸ ಸೌಲಭ್ಯಗಳು ಪೂರಕವಾಗಿವೆ.

.jpeg)