ದಲಿತ ದೌರ್ಜನ್ಯ, ಕೊಲೆ ಯತ್ನ ಪ್ರಕರಣ: ಮೂವರ ಬಂಧನ
Friday, August 07, 2026
ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾಲ ಗ್ರಾಮದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಿಗೆ ಸಂಬಂಧಿಸಿದಂತೆ ದಲಿತ ದೌರ್ಜನ್ಯ ಹಾಗೂ ಕೊಲೆ ಯತ್ನ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಆಗಸ್ಟ್ 6ರಂದು ಮಹಿಳೆಯೊಬ್ಬರಿಗೆ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಕೊಲ್ಲೂರು ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ, ಸನತ್ ಕುಂದಾಪುರ ಎಂಬಾತನನ್ನು ಬಂಧಿಸಲಾಗಿದೆ. ಅಲ್ಲದೇ ದೂರು ನೀಡಿದ ಮಹಿಳೆಯ ಸಂಬಂಧಿಕರು ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ಸನತ್ ಕುಮಾರ್ ನೀಡಿದ ದೂರಿನಂತೆ ರಾಮ್ ಕುಮಾರ್ ಹಾಗೂ ನಂದೀಶ್ ಕುಮಾರ್ ಎಂಬವರನ್ನು ಬಂಧಿಸಲಾಗಿದೆ.
ಎರಡೂ ಪ್ರಕರಣಗಳ ತನಿಖೆ ಮುಂದುವರಿದಿದ್ದು, ಪ್ರಕರಣಗಳಲ್ಲಿ ಭಾಗಿಯಾಗಿರುವ ಉಳಿದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.