ಕುಂದಾಪುರ: ಮನೆ ಬಾಗಿಲು ಮುರಿದು ಚಿನ್ನ, ನಗದು ಕಳವು
Friday, August 14, 2026
ಕುಂದಾಪುರದ ಬೊಬ್ಬರ್ಯನಕಟ್ಟೆ ಎದುರಿನ ಮನೆಯೊಂದರಲ್ಲಿ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವ ಘಟನೆ ನಡೆದಿದೆ.
ಬೊಬ್ಬರ್ಯನಕಟ್ಟೆ ಎದುರಿನ ಶಾರದಾ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಅವರ ಪುತ್ರ ವಿಜಯ್ ನವೀನ್ ಕುಮಾರ್ ಅವರು ತಾಯಿಯನ್ನು ಕೋಟದಲ್ಲಿರುವ ದೊಡ್ಡಮ್ಮನ ಮನೆಯಲ್ಲಿ ಬಿಟ್ಟು ಆ.8ರಂದು ಮುಂಬಯಿಗೆ ತೆರಳಿದ್ದರು. ಆ.13ರ ಬೆಳಗ್ಗೆ ಅವರು ವಾಪಸ್ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ
ಕಳ್ಳರು ಮನೆಯ ಮುಂಭಾಗದ ಬಾಗಿಲಿನ ಚಿಲಕವನ್ನು ಯಾವುದೋ ಆಯುಧದಿಂದ ಮುರಿದು ಒಳನುಗ್ಗಿದ್ದಾರೆ. ಬಳಿಕ ಗೋದ್ರೇಜ್‌ನಲ್ಲಿದ್ದ ಸುಮಾರು 8 ಗ್ರಾಂ ತೂಕದ ಚಿನ್ನಾಭರಣ ಹಾಗೂ ವಿದೇಶಿ ಕರೆನ್ಸಿ ಸೇರಿದಂತೆ ಅಂದಾಜು 95 ಸಾವಿರ ರೂ. ಮೌಲ್ಯದ ಚಿನ್ನ, ನಗದು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ.
ಕುಂದಾಪುರ ವೃತ್ತ ನಿರೀಕ್ಷಕ ಜಯರಾಮ ಗೌಡ, ನಗರ ಠಾಣೆಯ ಪಿಎಸ್‌ಐ ಪುಷ್ಪಾ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಕುರಿತು ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.