-->
ಉಡುಪಿ ಸಂಜೀವಿನಿ ಮಹಿಳಾ ಕಿಸಾನ್ ಪ್ರೊಡ್ಯೂಸರ್ ಕಂಪನಿಯಿಂದ ಮಸಾಲೆ ತಯಾರಿಕಾ ಘಟಕ ಆರಂಭ

ಉಡುಪಿ ಸಂಜೀವಿನಿ ಮಹಿಳಾ ಕಿಸಾನ್ ಪ್ರೊಡ್ಯೂಸರ್ ಕಂಪನಿಯಿಂದ ಮಸಾಲೆ ತಯಾರಿಕಾ ಘಟಕ ಆರಂಭ


ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಸಂಜೀವಿನಿ), ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ತಾಲೂಕು ಪಂಚಾಯತ್ ಉಡುಪಿ ಸಹಯೋಗದಲ್ಲಿ, ಉಡುಪಿ ತಾಲೂಕಿನ ಮಹಿಳಾ ನೇತೃತ್ವದ ರೈತ ಉತ್ಪಾದಕರ ಸಂಸ್ಥೆ (FPO) ಉಡುಪಿ ಸಂಜೀವಿನಿ ಮಹಿಳಾ ಕಿಸಾನ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್ (MKPC) ವತಿಯಿಂದ ಗ್ರಾಮೀಣ ಉದ್ಯಮಶೀಲತೆಯ ವಿಸ್ತರಣೆಯ ಭಾಗವಾಗಿ ನೂತನ ಮಸಾಲೆ ತಯಾರಿಕಾ ಘಟಕ ಆರಂಭಿಸಲಾಗಿದೆ.


ಘಟಕವನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಅವರು ಉದ್ಘಾಟಿಸಿದರು.


ಸ್ಥಳೀಯ ಕೃಷಿ ಉತ್ಪನ್ನಗಳಿಗೆ ಸೂಕ್ತ ಮೌಲ್ಯವರ್ಧನೆ ಕಲ್ಪಿಸುವ ಉದ್ದೇಶದಿಂದ ಆರಂಭಿಸಲಾಗಿರುವ ಈ ಘಟಕವು ರೈತ ಮಹಿಳೆಯರಿಗೆ ಸ್ವ-ಉದ್ಯೋಗ ಹಾಗೂ ಉದ್ಯಮಶೀಲತಾ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಿದೆ. ‘ಇಲ್ಲು ಫುಡ್ಸ್’ ಹೆಸರಿನಲ್ಲಿ ಕಾರ್ಯಾರಂಭಿಸಿರುವ ಮಸಾಲೆ ತಯಾರಿಕಾ ಘಟಕವು ಮಹಿಳೆಯರ ಆದಾಯ ಮತ್ತು ಜೀವನೋಪಾಯ ವೃದ್ಧಿಗೆ ಸಹಕಾರಿಯಾಗುವ ನಿರೀಕ್ಷೆ ಇದೆ.


ಸ್ಥಳೀಯವಾಗಿ ಲಭ್ಯವಿರುವ ಕೃಷಿ ಉತ್ಪನ್ನಗಳನ್ನು ಸಂಸ್ಕರಿಸಿ ಮೌಲ್ಯವರ್ಧಿತ ಉತ್ಪನ್ನಗಳನ್ನಾಗಿ ಪರಿವರ್ತಿಸುವ ಮೂಲಕ ರೈತ ಮಹಿಳೆಯರಿಗೆ ಹೆಚ್ಚಿನ ಆರ್ಥಿಕ ಅವಕಾಶಗಳನ್ನು ಸೃಷ್ಟಿಸುವುದು ಘಟಕದ ಪ್ರಮುಖ ಉದ್ದೇಶವಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಭಾಯಲ್, ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಯೋಜನಾ ನಿರ್ದೇಶಕ ಉದಯ್ ಶೆಟ್ಟಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವಿಜಯ, ಸಹಾಯಕ ನಿರ್ದೇಶಕಿ ಫರ್ಝಾನ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಅಭಿಯಾನ ನಿರ್ವಹಣಾ ಘಟಕದ ಅಧಿಕಾರಿಗಳು ಉಪಸ್ಥಿತರಿದ್ದರು.

ಇದೇ ವೇಳೆ ಸಂಜೀವಿನಿ ಅಭಿಯಾನದ ಅಧಿಕಾರಿಗಳು ಹಾಗೂ ಸಿಬ್ಬಂದಿ, MKPC ನಿರ್ದೇಶಕ ಮಂಡಳಿಯ ಸದಸ್ಯರು, ಸಂಜೀವಿನಿ ಸ್ವಸಹಾಯ ಗುಂಪುಗಳ ಪ್ರತಿನಿಧಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.

ಮಹಿಳೆಯರ ಸ್ವಾವಲಂಬನೆ, ಸ್ಥಳೀಯ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ಗ್ರಾಮೀಣ ಮಟ್ಟದಲ್ಲಿ ಉದ್ಯೋಗ ಸೃಷ್ಟಿಗೆ ಈ ಮಸಾಲೆ ತಯಾರಿಕಾ ಘಟಕ ಹೊಸ ಅವಕಾಶವನ್ನು ಒದಗಿಸುವಂತಾಗಿದೆ.

Ads on article

Advertise in articles 1

advertising articles 2

Advertise under the article