-->
ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ 20ನೇ ಬಾರಿಗೆ ಸಾಧನಾ ಪ್ರಶಸ್ತಿ

ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ 20ನೇ ಬಾರಿಗೆ ಸಾಧನಾ ಪ್ರಶಸ್ತಿ



ಸಹಕಾರ ಕ್ಷೇತ್ರದಲ್ಲಿ ನಿರಂತರ ಪ್ರಗತಿ ಮತ್ತು ಸರ್ವತೋಮುಖ ಅಭಿವೃದ್ಧಿಯನ್ನು ಸಾಧಿಸಿರುವ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಉಡುಪಿ ಇದರ 2025-26ನೇ ಸಾಲಿನ ಕಾರ್ಯಕ್ಷಮತೆಗಾಗಿ ಸತತ 20ನೇ ಬಾರಿಗೆ  ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಿಂದ ನೀಡಲ್ಪಡುವ  ಸಾಧನಾ ಪ್ರಶಸ್ತಿ ಲಭಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬ್ಯಾಂಕ್‌ನ ಅಧ್ಯಕ್ಷರಾದ ಡಾ| ಎಂ . ಎನ್. ರಾಜೇಂದ್ರ ಕುಮಾರ್ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ ಶೇರಿಗಾರ್ ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ  ಸಂಸ್ಥೆಯ ನಿರ್ದೇಶಕರಾದ ಎಲ್. ಉಮಾನಾಥ, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ಲಾವಣ್ಯ ಕೆ.ಆರ್, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ರಮೇಶ್ ಎಚ್.ಎನ್ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.



 


Ads on article

Advertise in articles 1

advertising articles 2

Advertise under the article