ಸ್ವಯಂಸೇವಕ ಸಂಘದ ಕಾರ್ಯಕರ್ತ ಕೇಶವರಾಯ ಪ್ರಭು ನಿಧನ: ಜಿಲ್ಲಾ ಬಿಜೆಪಿ ಸಂತಾಪ
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸಕ್ರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ (80) ಅವರು ನಿಧನರಾಗಿದ್ದು, ಉಡುಪಿ ಜಿಲ್ಲಾ ಬಿಜೆಪಿ ಸಂತಾಪ ವ್ಯಕ್ತಪಡಿಸಿದೆ.
ಸಿಂಡಿಕೇಟ್ ಬ್ಯಾಂಕ್ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದ ಬಳಿಕ ರಾಷ್ಟ್ರೀಯ ಸ್ವಯಂಸೇವಕ ಸಂಘದ ಉಡುಪಿ ಜಿಲ್ಲಾ ಕಾರ್ಯವಾಹರಾಗಿ, ಮಂಗಳೂರು ವಿಭಾಗದ ಸೇವಾ ಪ್ರಮುಖರಾಗಿ ಹಾಗೂ ಕುಂದಾಪುರದ ಸೇವಾ ಸಂಗಮದ ಅಧ್ಯಕ್ಷರಾಗಿ ಕೇಶವರಾಯ ಪ್ರಭು ಅವರು ಸಮರ್ಪಣಾಭಾವದಿಂದ ಸೇವೆ ಸಲ್ಲಿಸಿದ್ದರು.
“ಕೇಶವರಾಯ ಪ್ರಭು ಅವರ ಸೇವಾ ಮನೋಭಾವ ಮತ್ತು ಸಮರ್ಪಣಾ ಜೀವನ ಎಲ್ಲರಿಗೂ ಪ್ರೇರಣಾದಾಯಕ. ಅವರ ಅಗಲಿದ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿ ಕರುಣಿಸಲಿ. ಅವರ ಕುಟುಂಬದ ಸದಸ್ಯರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ” ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಶವರಾಯ ಪ್ರಭು ಅವರ ನಿಧನಕ್ಕೆ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್ಪಾಲ್ ಎ. ಸುವರ್ಣ, ವಿ. ಸುನೀಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.
ಬಿಜೆಪಿ ಮುಖಂಡರಾದ ಕೆ. ಉದಯ ಕುಮಾರ್ ಶೆಟ್ಟಿ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮಟ್ಟಾರ್ ರತ್ನಾಕರ ಹೆಗ್ಡೆ, ಕುಯಿಲಾಡಿ ಸುರೇಶ್ ನಾಯಕ್, ಶಿಲ್ಪಾ ಜಿ. ಸುವರ್ಣ, ದಿನಕರ ಬಾಬು, ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್ ಸೇರಿದಂತೆ ಪಕ್ಷದ ಪ್ರಮುಖರು ಕೇಶವರಾಯ ಪ್ರಭು ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.