ಪೆಲೆಟ್ ಗನ್‌ನಿಂದ ದಾಳಿ: ರಾಹುಲ್ ಗಾಂಧಿ ಧರಣಿ ಬಳಿಕ FIR ದಾಖಲಿಸಲು ಒಪ್ಪಿದ ದೆಹಲಿ ಪೊಲೀಸರು
Friday, August 21, 2026
ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಧರಣಿ ಪ್ರತಿಭಟನೆಯ ನಂತರ 19 ವರ್ಷದ ಪ್ರತಿಭಟನಾಕಾರನಿಗೆ ಪೆಲೆಟ್ ಗನ್‌ನಿಂದ ಗಾಯಗಳಾಗಿವೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲು ದೆಹಲಿ ಪೊಲೀಸರು ಒಪ್ಪಿಕೊಂಡಿದ್ದಾರೆ.
ಸಂತ್ರಸ್ತ ವಿದ್ಯಾರ್ಥಿ ಸಾಹಿಲ್ ಲೋಚಬ್ ಹಾಗೂ ಆತನ ತಾಯಿಯೊಂದಿಗೆ ಪೊಲೀಸ್ ಠಾಣೆಗೆ ತೆರಳಿದ ರಾಹುಲ್ ಗಾಂಧಿ, ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವಂತೆ ಪೊಲೀಸರನ್ನು ಒತ್ತಾಯಿಸಿದ್ದರು. ಆದರೆ ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಠಾಣೆಯ ಹೊರಭಾಗದಲ್ಲೇ ಕುಳಿತು ಪ್ರತಿಭಟನೆ ಆರಂಭಿಸಿದ್ದರು..
ಬಳಿಕ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಸ್ಥಳಕ್ಕೆ ಆಗಮಿಸಿ ಧರಣಿಯಲ್ಲಿ ಭಾಗಿಯಾದ್ದರು.