HDFC Life ವತಿಯಿಂದ ಉಡುಪಿ ಜಿಲ್ಲಾ ಪೊಲೀಸರಿಗೆ 40 ಬ್ಯಾರಿಕೇಡ್‌ಗಳ ಹಸ್ತಾಂತರ
Monday, August 17, 2026
ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಂತ್ರಣವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳುವ ಉದ್ದೇಶದಿಂದ HDFC Life ವತಿಯಿಂದ ಉಡುಪಿ ಜಿಲ್ಲಾ ಪೊಲೀಸರಿಗೆ 40 ಬ್ಯಾರಿಕೇಡ್‌ಗಳನ್ನು ಹಸ್ತಾಂತರಿಸಲಾಯಿತು.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ HDFC Life ಸಂಸ್ಥೆಯ ಪ್ರತಿನಿಧಿಗಳು ಬ್ಯಾರಿಕೇಡ್‌ಗಳನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರಿಸಿದರು.
ನಗರ ಹಾಗೂ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಚಾರ ನಿಯಂತ್ರಣ, ರಸ್ತೆ ಸುರಕ್ಷತೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ಕಾರ್ಯದಲ್ಲಿ ಈ ಬ್ಯಾರಿಕೇಡ್‌ಗಳು ಪೊಲೀಸ್ ಇಲಾಖೆಗೆ ಸಹಕಾರಿಯಾಗಲಿವೆ.
ಕಾರ್ಯಕ್ರಮದಲ್ಲಿ ಮಲ್ಪೆ ಸಿಪಿಐ ರಾಮಚಂದ್ರ ನಾಯಕ್, ಟ್ರಾಫಿಕ್ ಪಿಎಸ್‌ಐ ಮಹೇಶ್ ಸೇರಿದಂತೆ ಪೊಲೀಸ್ ಇಲಾಖೆಯ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
HDFC Life ವತಿಯಿಂದ ಉಡುಪಿ ಶಾಖಾ ವ್ಯವಸ್ಥಾಪಕರಾದ ಭರತ್, ಬಿಸಿನೆಸ್ ಮ್ಯಾನೇಜರ್ ಸಂದೀಪ್ ನಾಯಕ್, ಎಕ್ಸಿಕ್ಯೂಟಿವ್ ಸೇಲ್ಸ್ ಮ್ಯಾನೇಜರ್ ನಂದಾ ದೀಪ್, ಸೇಲ್ಸ್ ಮ್ಯಾನೇಜರ್ ಶೈಲೇಶ್ ಶೆಟ್ಟಿ ಹಾಗೂ ಕಾರ್ಯಕ್ರಮದ ಆಯೋಜಕರಾದ ಯೋಗೀಶ್ ಅವರು ಭಾಗವಹಿಸಿದ್ದರು.
