-->
ಉಡುಪಿ: ಮರಕ್ಕೆ ಬುಲೆಟ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಉಡುಪಿ: ಮರಕ್ಕೆ ಬುಲೆಟ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು


ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಉಡುಪಿಯ ಕೆಳ ಪರ್ಕಳ ಸಮೀಪ ನಡೆದಿದೆ.


ಮೃತಪಟ್ಟವರನ್ನು ಆತ್ರಾಡಿ ನಿವಾಸಿ ಸನತ್ (21) ಎಂದು ಗುರುತಿಸಲಾಗಿದೆ. ಸನತ್ ಮಣಿಪಾಲದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಬುಲೆಟ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗಿ ಸಮೀಪದ ಚರಂಡಿಗೆ ಎಸೆಯಲ್ಪಟ್ಟಿದ್ದರು. ಗಂಭೀರ ಗಾಯಗೊಂಡ ಸನತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article