ದಿವ್ಯಾಂಗರಿಗೆ ಮಾಸಿಕ ಭತ್ಯೆ ವಿಳಂಬವಾಗದಂತೆ ಕ್ರಮಕ್ಕೆ ಒತ್ತಾಯಿಸಿ ಮನವಿ
Friday, August 07, 2026
ದಿವ್ಯಾಂಗರಿಗೆ ಸರ್ಕಾರದ ಸೌಲಭ್ಯಗಳು ಸುಲಭವಾಗಿ ಹಾಗೂ ಸಮಯಕ್ಕೆ ತಲುಪುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿಗಳಿಗೆ ಸಾಮಾಜಿಕ ಕಾರ್ಯಕರ್ತ ಕೆ. ವಿಜಯ ಕೊಡವೂರು ಹಾಗೂ ಸ್ಥಳೀಯ ನಾಗರಿಕರು ಮನವಿ ಸಲ್ಲಿಸಿದರು.
ದಿವ್ಯಾಂಗರ ಸೇವೆಗಳನ್ನು ಮತ್ತಷ್ಟು ಸುಲಭ ಹಾಗೂ ಪರಿಣಾಮಕಾರಿಯಾಗಿಸಲು ಯುಡಿಐಡಿ (UDID) ಕಾರ್ಡ್ ಸೇವಾ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸಬೇಕು ಹಾಗೂ ದಿವ್ಯಾಂಗ ಫಲಾನುಭವಿಗಳಿಗೆ ಪ್ರತಿ ತಿಂಗಳು ದೊರೆಯಬೇಕಾದ ಮಾಸಿಕ ಭತ್ಯೆಯನ್ನು ಯಾವುದೇ ವಿಳಂಬವಿಲ್ಲದೆ ಸಮಯಕ್ಕೆ ಸರಿಯಾಗಿ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.
ಮಾಸಿಕ ಭತ್ಯೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಅನೇಕ ದಿವ್ಯಾಂಗರು ತಮ್ಮ ದಿನನಿತ್ಯದ ಜೀವನ ನಿರ್ವಹಣೆ ಹಾಗೂ ಅಗತ್ಯ ಔಷಧಿಗಳನ್ನು ಖರೀದಿಸಲು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಮಾನವೀಯ ದೃಷ್ಟಿಯಿಂದ ಕೂಡಲೇ ಬಾಕಿ ಇರುವ ಭತ್ಯೆಯನ್ನು ಬಿಡುಗಡೆ ಮಾಡಿ, ಮುಂದಿನ ದಿನಗಳಲ್ಲಿ ನಿಯಮಿತವಾಗಿ ವಿತರಿಸುವಂತೆ ಒತ್ತಾಯಿಸಲಾಗಿದೆ.