ಉಡುಪಿ ಕೋರ್ಟ್‌ನಲ್ಲಿ ‘ಆಟಿದ ಲೇಸು’ ಸಂಭ್ರಮ
ತುಳುನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಆಚಾರ-ವಿಚಾರಗಳನ್ನು ಯುವಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಶುಕ್ರವಾರ ‘ಆಟಿದ ಲೇಸು’ ಸಂಭ್ರಮ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ರಾಜ್ಯ ವಕೀಲರ ಪರಿಷತ್ ಸದಸ್ಯ ಪದ್ಮಪ್ರಸಾದ್ ಹೆಗ್ಡೆ ಅವರನ್ನು ಉಡುಪಿ ವಕೀಲರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಪದ್ಮಪ್ರಸಾದ್ ಹೆಗ್ಡೆ, “ಉಡುಪಿ ವಕೀಲರ ಸಂಘವು ಈ ನೆಲದ ಸಂಸ್ಕೃತಿಯನ್ನು ಯುವಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಉತ್ತಮ ಹಾಗೂ ಮಾದರಿ ಕಾರ್ಯಕ್ರಮ ಆಯೋಜಿಸಿದೆ. ಇಂತಹ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸುತ್ತಿರುವುದು ನನ್ನ ಸೌಭಾಗ್ಯ” ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ವಹಿಸಿದ್ದರು.
ವೇದಿಕೆಯಲ್ಲಿ ಉಡುಪಿ ವಕೀಲರ ಸಂಘದ ಉಪಾಧ್ಯಕ್ಷ ದೇವದಾಸ್ ವಿ. ಶೆಟ್ಟಿಗಾರ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ, ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಶ್ರೀನಾಥ್ ರಾವ್, ಉಡುಪಿ ಅಡ್ವೋಕೇಟ್ಸ್ ವೆಲ್ಫೇರ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಅಧ್ಯಕ್ಷ ಜಯಪ್ರಕಾಶ್ ಕೆದ್ಲಾಯ ಉಪಸ್ಥಿತರಿದ್ದರು.
ವಕೀಲರ ಸಂಘದ ಸೀನಿಯರ್ ಕೌನ್ಸಿಲ್ ವೈ.ಟಿ. ರಾಘವೇಂದ್ರ ಸ್ವಾಗತಿಸಿದರು. ನ್ಯಾಯವಾದಿ ಅಖಿಲ್ ಬಿ. ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.