ಕಾಪು ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ
Friday, August 07, 2026
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಅವರು ಇಂದು ಕಾಪು ಲೈಟ್‌ಹೌಸ್ ಸಮೀಪದ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಕಡಲ್ಕೊರೆತದಿಂದ ಉಂಟಾಗಿರುವ ಹಾನಿ, ಸಮುದ್ರದ ಅಲೆಗಳ ತೀವ್ರತೆ ಹಾಗೂ ಸ್ಥಳೀಯ ನಿವಾಸಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸ್ಥಳೀಯ ಜನರ ಅಹವಾಲುಗಳನ್ನು ಆಲಿಸಿದ ಸಚಿವರು, ಕಡಲ ಕೊರೆತವನ್ನು ತಡೆಗಟ್ಟಲು ಅಗತ್ಯ ಮುಂಜಾಗ್ರತಾ ಹಾಗೂ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳುವ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ಸರ್ಕಾರದಿಂದ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಂಡು ಜನರ ಆಸ್ತಿ-ಪಾಸ್ತಿ ಹಾಗೂ ಜೀವ ರಕ್ಷಣೆಗೆ ಆದ್ಯತೆ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು, ಸಂಬಂಧಿತ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

