ಉಡುಪಿಯಲ್ಲಿ ಲಯನ್ಸ್ ಪದಾಧಿಕಾರಿಗಳಿಗೆ ‘ಜ್ಞಾನದೀಪ’ ತರಬೇತಿ ಶಿಬಿರ ಯಶಸ್ವಿ
ಲಯನ್ಸ್ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಖಜಾಂಚಿಗಳ (PST) ಜವಾಬ್ದಾರಿಗಳ ಕುರಿತು ಮಾರ್ಗದರ್ಶನ ನೀಡುವ ‘ಜ್ಞಾನದೀಪ’ ತರಬೇತಿ ಶಿಬಿರವು ಉಡುಪಿಯ ಅಂಬಲಪಾಡಿಯ ಹೊಟೇಲ್ ಕಾರ್ತಿಕ್ ಎಸ್ಟೇಟ್‌ನಲ್ಲಿ ನಡೆಯಿತು.
ಲಯನ್ಸ್ ಡಿಸ್ಟ್ರಿಕ್ಟ್ 317ಸಿ ನ ಜಿಲ್ಲಾ ಗವರ್ನರ್ ರಾಜೀವ್ ಕೊಟ್ಯಾನ್ ಅವರು ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ಗೌರವಾನ್ವಿತ ಅತಿಥಿಗಳಾಗಿ ಲಯನ್ಸ್ ಜಿಲ್ಲೆ 317ಸಿ ಪ್ರಥಮ ಉಪ ಜಿಲ್ಲಾ ಗವರ್ನರ್ ಹರಿಪ್ರಸಾದ್ ರೈ ಹಾಗೂ ಲಯನ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317C ಯ ಎರಡನೇ ಉಪ ಜಿಲ್ಲಾ ಗವರ್ನರ್ ರಮಾನಂದ ಕೆ. ಅವರು ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಗಳಾದ ಮೆಲ್ವಿನ್ ಡಿಸೋಜಾ ಮತ್ತು ರವಿರಾಜ್ ನಾಯಕ್ ಅವರು ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಪ್ರಾಂತೀಯ ಅಧ್ಯಕ್ಷರಾದ ಲೂವಿಸ್ ಲೋಬೋ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಲಯ 2ರ ಶೇಖರ್ ಡಿ. ಶೆಟ್ಟಿ, ವಲಯ 3ರ ಲವೀನಾ ಎ. ಬಾರ್ಬೋಜಾ, ಜಿಲ್ಲಾ ಸಂಪುಟ ಕಾರ್ಯದರ್ಶಿ ಸದಾನಂದ ನಾವಡ ಹಾಗೂ ಜಿಲ್ಲಾ ಸಂಪುಟ ಖಜಾಂಚಿ ವಿನೋದ ನಾರಾಯಣ್ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು. ವಲಯ 1ರ ಅಧ್ಯಕ್ಷರಾದ ದಿನೇಶ್ ಕಿಣಿ ಕಾರ್ಯಕ್ರಮ ನಿರೂಪಿಸಿದರು. ರೀಜನ್ 3ರ ಪ್ರಾದೇಶಿಕ ಕಾರ್ಯದರ್ಶಿ ಗಿರೀಶ್ ಐತಾಳ್ ವಂದಿಸಿದರು.
ಲಯನ್ಸ್ ಪದಾಧಿಕಾರಿಗಳ ಜವಾಬ್ದಾರಿಗಳು, ಸಂಸ್ಥೆಯ ವಿವಿಧ ಚಟುವಟಿಕೆಗಳ ಪರಿಣಾಮಕಾರಿ ನಿರ್ವಹಣೆ ಹಾಗೂ ಮುಂದಿನ ಶೈಕ್ಷಣಿಕ ಮತ್ತು ಸಾಮಾಜಿಕ ವರ್ಷದ ಕಾರ್ಯಕ್ರಮಗಳ ಯೋಜನೆ ಕುರಿತು ಸಮಗ್ರ ಮಾರ್ಗದರ್ಶನ ನೀಡಲಾಯಿತು.
ಶಿಬಿರದಲ್ಲಿ ಲಯನ್ಸ್ ಸಂಸ್ಥೆಯ 13 ಕ್ಲಬ್ ಗಳ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಪ್ರಥಮ ಉಪಾಧ್ಯಕ್ಷರು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
