-->
 ಕಾಂಗ್ರೆಸ್‌ನ ಹಿರಿಯ ಮುಖಂಡ ಗೋಪಾಲಕೃಷ್ಣ ಯಾಡಿಯಾಳ್ ನಿಧನ

ಕಾಂಗ್ರೆಸ್‌ನ ಹಿರಿಯ ಮುಖಂಡ ಗೋಪಾಲಕೃಷ್ಣ ಯಾಡಿಯಾಳ್ ನಿಧನ


ಕುಂದಾಪುರ ಹಳ್ಳಿಹೊಳೆ–ಕಮಲಶಿಲೆ ಭಾಗದ ಹಿರಿಯ ಕಾಂಗ್ರೆಸ್ ಮುಖಂಡ  ಗೋಪಾಲಕೃಷ್ಣ ಯಾಡಿಯಾಳ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹಳ್ಳಿಹೊಳೆ–ಕಮಲಶಿಲೆ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಗೋಪಾಲಕೃಷ್ಣ ಯಾಡಿಯಾಳ್ ಅವರು ಪ್ರಮುಖ ಪಾತ್ರ ವಹಿಸಿದ್ದರು. ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಸ್ಥಳೀಯ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ಶ್ರಮಿಸಿದ್ದರು.

ಹಳ್ಳಿಹೊಳೆ ಗ್ರಾಮ ಪಂಚಾಯತ್ ಸದಸ್ಯರಾಗಿ ಹಾಗೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಗ್ರಾಮೀಣ ಭಾಗದ ಅಭಿವೃದ್ಧಿ ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದರು.

ಅವರ ಹಠಾತ್ ನಿಧನದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಗೋಪಾಲಕೃಷ್ಣ ಯಾಡಿಯಾಳ್ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಸಂತಾಪ ವ್ಯಕ್ತಪಡಿಸಿದ್ದು, ಅವರ ಕುಟುಂಬ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Ads on article

Advertise in articles 1

advertising articles 2

Advertise under the article