ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ
Saturday, August 15, 2026
80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಬಳಿಕ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ರಾಷ್ಟ್ರಧ್ವಜಕ್ಕೆ ಗೌರವ ಸಮರ್ಪಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಪೊಲೀಸ್/ಲಿಪಿಕ ಅಧಿಕಾರಿ ಸೇರಿದಂತೆ ಜಿಲ್ಲಾ ಪೊಲೀಸ್ ಕಚೇರಿಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.